ಭಾರತದಲ್ಲಿ ರಷ್ಯಾದ ಸ್ಪುಟ್ನಿಕ್ ಲಸಿಕೆ ಪ್ರಯೋಗಕ್ಕೆ ಕೊನೆಗೂ ಅನುಮತಿ
ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿಯೇ ಸ್ಪುಟ್ನಿಕ್ ವಿ ಲಸಿಕೆ ಪ್ರಯೋಗ ಮಾಡುವುದಾಗಿ ಈ ಮೊದಲು ಘೋಷಿಸಿತ್ತು.
Team Udayavani, Oct 17, 2020, 6:55 PM IST
ನವದೆಹಲಿ: ರಷ್ಯಾ ಅಭಿವೃದ್ಧಿ ಪಡಿಸಿದ್ದ ಕೋವಿಡ್ 19 ಸೋಂಕು ಗುಣಪಡಿಸುವ ಸ್ಪುಟ್ನಿಕ್ ವಿ ಲಸಿಕೆಯ ಪ್ರಯೋಗ ಮಾಡಲು ಭಾರತೀಯ ಔಷಧ ಮಹಾ ನಿರ್ದೇಶನಾಲಯ ನಿರಾಕರಿಸಿದ್ದು, ಇದೀಗ ಭಾರತದ ಔಷಧ ನಿಯಂತ್ರಕ ಸಂಸ್ಥೆ ಲಸಿಕೆಯ ಕ್ಲಿನಿಕಲ್ ಮಾನವ ಪ್ರಯೋಗ ನಡೆಸಲು ಡಾ.ರೆಡ್ಡೀಸ್ ಲ್ಯಾಬೋರೇಟರಿ ಲಿಮಿಟೆಡ್ ಗೆ ಕೊನೆಗೂ ಅನುಮತಿ ನೀಡಿದೆ ಎಂದು ವರದಿ ತಿಳಿಸಿದೆ.
ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿಯೇ ಸ್ಪುಟ್ನಿಕ್ ವಿ ಲಸಿಕೆ ಪ್ರಯೋಗ ಮಾಡುವುದಾಗಿ ಈ ಮೊದಲು ಘೋಷಿಸಿತ್ತು. ಆದರೆ ಅದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈಗಾಗಲೇ ರಷ್ಯಾದಲ್ಲಿ ಮೊದಲ ಮತ್ತು ಎರಡನೇ ಹಂತದ ಪ್ರಯೋಗ ನಡೆಸಲಾಗಿದೆ.
ನೂತನ ಒಪ್ಪಂದದ ಪ್ರಕಾರ, ಎರಡನೇ ಮತ್ತು 3ನೇ ಹಂತದ ಮಾನವ ಕ್ಲಿನಿಕಲ್ ಪ್ರಯೋಗದಲ್ಲಿ 1,500 ಜನರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದೆ. ಒಪ್ಪಂದದ ಪ್ರಕಾರ ಡಾ.ರೆಡ್ಡೀಸ್ ಕ್ಲಿನಿಕಲ್ ಟ್ರಯಲ್ ನಡೆಸಲಿದ್ದಾರೆ ಎಂದು ತಿಳಿಸಿದೆ.
ಭಾರತದಲ್ಲಿ ಸ್ಪುಟ್ನಿಕ್ ಲಸಿಕೆ ಪ್ರಯೋಗ ಮತ್ತು ಹಂಚಿಕೆ ಸಂಬಂಧ ಆರ್ ಡಿಐಎಫ್ ಮತ್ತು ಡಾ.ರೆಡ್ಡೀಸ್ ಲ್ಯಾಬ್ ಒಪ್ಪಂದ ಮಾಡಿಕೊಂಡಿದ್ದು, ಒಪ್ಪಂದದ ಪ್ರಕಾರ ಭಾರತಕ್ಕೆ 100 ಮಿಲಿಯನ್ ಸ್ಪುಟ್ನಿಕ್ ಡೋಸ್ ಲಭ್ಯವಾಗಲಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.