Rajya Sabha: ಎಸ್.ಜೈಶಂಕರ್ ಸೇರಿದಂತೆ 11 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
Team Udayavani, Jul 17, 2023, 5:16 PM IST
ಹೊಸದಿಲ್ಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಓ ಬ್ರಿಯಾನ್ ಸೇರಿದಂತೆ 11 ನಾಯಕರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಡಳಿತಾರೂಢ ಬಿಜೆಪಿ ಒಂದು ಸ್ಥಾನವನ್ನು ಗಳಿಸಲಿದ್ದು, ಕೇಂದ್ರ ಸರ್ಕಾರಕ್ಕೆ ಬಹುಮತವಿಲ್ಲದ ರಾಜ್ಯಸಭೆಯಲ್ಲಿ 93 ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಲಿದೆ.
ಪಶ್ಚಿಮ ಬಂಗಾಳದ ಆರು, ಗುಜರಾತ್‌ನಲ್ಲಿ ಮೂರು ಮತ್ತು ಗೋವಾದಲ್ಲಿ ಒಂದು ಸ್ಥಾನಗಳಲ್ಲಿ ಎದುರಾಳಿ ಅಭ್ಯರ್ಥಿಗಳಿಲ್ಲ. ಹೀಗಾಗಿ ಇಲ್ಲಿ ನಿಗದಿಯಂತೆ ಜುಲೈ 24 ರಂದು ಮತದಾನ ನಡೆಯುವುದಿಲ್ಲ. ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು.
ಇದನ್ನೂ ಓದಿ:ಯಲಗೂರೇಶ್ವರ ದೇವರ ಹುಂಡಿಯಲ್ಲಿ ನೇಪಾಳಿ ನೋಟು, ಪಿಎಸ್‍ಐ, ಕ್ಲರ್ಕ್ ಹುದ್ದೆ ನೇಮಕಕ್ಕೆ ಹರಕೆ!
ಆರು ತೃಣಮೂಲ ಕಾಂಗ್ರೆಸ್ ಮತ್ತು ಐದು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಪಶ್ಚಿಮ ಬಂಗಾಳದ ಒಂದು ರಾಜ್ಯ ಸಭಾ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ತೃಣಮೂಲ ಕೂಡ ಗೆದ್ದಿದೆ.
ಎಸ್ ಜೈಶಂಕರ್ ಮೇಲ್ಮನೆಯಲ್ಲಿ ಎರಡನೇ ಬಾರಿಗೆ ಗೆದ್ದಿದ್ದಾರೆ. ಬಾಬುಭಾಯಿ ದೇಸಾಯಿ ಮತ್ತು ಕೇಸರಿದೇವ್ ಸಿಂಗ್ ಝಾಲಾ ಅವರು ಗುಜರಾತ್ ನಿಂದ ಬಿಜೆಪಿ ಅಭ್ಯರ್ಥಿಗಳು, ಅನಂತ್ ಮಹಾರಾಜ್ ಪಶ್ಚಿಮ ಬಂಗಾಳದಿಂದ ಮತ್ತು ಸದಾನಂದ್ ಶೇಟ್ ತನವಡೆ ಗೋವಾದಿಂದ ಆಯ್ಕೆಯಾಗಿದ್ದಾರೆ.
ಡೆರೆಕ್ ಒ’ಬ್ರೇನ್ ಜೊತೆಗೆ, ಅವಿರೋಧವಾಗಿ ಆಯ್ಕೆಯಾದ ಇತರ ತೃಣಮೂಲ ಕಾಂಗ್ರೆಸ್ ನಾಯಕರೆಂದರೆ ಸುಖೇಂದು ಶೇಖರ್ ರಾಯ್, ಡೋಲಾ ಸೇನ್, ಸಾಕೇತ್ ಗೋಖಲೆ, ಸಮೀರುಲ್ ಇಸ್ಲಾಂ ಮತ್ತು ಪ್ರಕಾಶ್ ಬಾರಿಕ್.
ರಾಜ್ಯಸಭೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನು ಕಳೆದುಕೊಂಡು 30 ಸದಸ್ಯರಿಗೆ ಇಳಿಯಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.