![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 28, 2020, 2:31 AM IST
ವಿಶ್ವವನ್ನೇ ತಲ್ಲಣಗೊಳಿಸಿರುವ ಕೋವಿಡ್ 19 ವೈರಸ್ ಸೋಂಕನ್ನು ನಿವಾರಿಸುವ ನಿಟ್ಟಿನಲ್ಲಿ ಎಲ್ಲಾ ಸಾರ್ಕ್ ರಾಷ್ಟ್ರಗಳೂ ಆನ್‌ಲೈನ್ ವೇದಿಕೆಯೊಂದನ್ನು ರೂಪಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆಗೆ ಅನುಗುಣವಾಗಿ, ಆನ್‌ಲೈನ್ ವೇದಿಕೆಯೊಂದನ್ನು ಸಿದ್ಧಗೊಳಿಸಲಾಗುತ್ತಿದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಮಾ. 15ರಿಂದಲೇ ನಡೆಯುತ್ತಿರುವ ಗುರುವಾರ ನಡೆದ ಸಾರ್ಕ್ ರಾಷ್ಟ್ರಗಳ ಮುಖ್ಯಸ್ಥರ ಆನ್‌ಲೈನ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮೋದಿ, ಕೋವಿಡ್ 19 ಸೋಂಕು ಎದುರಿಸುತ್ತಿರುವ ಬಗ್ಗೆ ಸಾರ್ಕ್ ರಾಷ್ಟ್ರಗಳು ಗಳಿಸಿರುವ ನೈಪುಣ್ಯತೆ ಹಾಗೂ ಜ್ಞಾನವನ್ನು ಸಾರ್ಕ್‌ನ ಇತರ ಸದಸ್ಯ ರಾಷ್ಟ್ರಗಳೊಂದಿಗೆ ವಿನಿಮಯ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಒಂದು ಆನ್‌ಲೈನ್ ವೇದಿಕೆಯನ್ನು ನಿರ್ಮಿಸಬೇಕು ಎಂದು ಅವರು ಕರೆ ನೀಡಿದ್ದರು.
‘ಪ್ರಧಾನಿ ಆಶಯದಂತೆ, ಸಾರ್ಕ್ ರಾಷ್ಟ್ರಗಳಲ್ಲಿ ಕೋವಿಡ್ 19 ಸೋಂಕನ್ನು ಎದುರಿಸುತ್ತಿರುವ ತಜ್ಞ ವೈದ್ಯರು ಹಾಗೂ ಇನ್ನಿತರ ವೈದ್ಯಕೀಯ ಸಿಬ್ಬಂದಿಗಳನ್ನು ಒಗ್ಗೂಡಿಸಿದ ನೆಟ್‌ವರ್ಕನ್ನು ಸ್ಥಾಪಿಸಲಾಗಿದೆ. ಈ ತಜ್ಞರು ತಾವು ಪಡೆದ ಜ್ಞಾನವನ್ನು ಇ-ಮೇಲ್, ವಾಟ್ಸ್‌ಆ್ಯಪ್ ಮೂಲಕ ಪರಸ್ಪರ ಹಂಚಿಕೊಳ್ಳಲಿದ್ದಾರೆ’ ಎಂದು ವಿದೇಶಾಂಗ ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದಾರೆ.
‘ಕೋವಿಡ್ 19 ಪಿಡುಗು ನಿವಾರಣೆಯಾದ ನಂತರವೂ ಈ ವೇದಿಕೆ ಮುಂದುವರಿದು ಹಲವಾರು ಯೋಜನೆಗಳಿಗೂ ಉಪಯೋಗವಾಗಲಿದೆ’ ಎಂದು ಅವರು ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.