ಶಬರಿಮಲೆ: ಇಂದು ಚಿನ್ನ, ಬೆಳ್ಳಿ ತಪಾಸಣೆ
Team Udayavani, May 27, 2019, 6:10 AM IST
ತಿರುವನಂತಪುರ: ಶಬರಿಮಲೆ ಭಕ್ತರು ನೀಡಿರುವ ಚಿನ್ನದ ಕಾಣಿಕೆಗಳ ಪ್ರಮಾಣದಲ್ಲಿ ಗಣನೀಯ ಇಳಿಮುಖವಾಗಿರುವುದನ್ನು ಪತ್ತೆ ಹಚ್ಚಿರುವ ಕೇರಳ ಸರಕಾರದ ಲೆಕ್ಕ ಪರಿಶೋಧನಾ ಇಲಾಖೆ, ಈ ಹಿನ್ನೆಲೆಯಲ್ಲಿ ದೇಗುಲದ ಸ್ಟ್ರಾಂಗ್ ರೂಂನಲ್ಲಿ ಇಡಲಾಗಿರುವ ಎಲ್ಲ ಚಿನ್ನ ಹಾಗೂ ಬೆಳ್ಳಿ ಕಾಣಿಕೆಗಳಿಗೆ ಸಂಬಂಧಿಸಿದ ದಾಖಲೆಗಳ ತಪಾಸಣೆ ನಡೆಸುವುದಾಗಿ ಹೇಳಿದೆ.
ಭಕ್ತರು ದಾನವಾಗಿ ಕೊಡುವ ವೇಳೆ ದಾಖಲೆಗಳಲ್ಲಿ ಉಲ್ಲೇಖೀಸಲಾಗಿರುವ ಚಿನ್ನದ ಪ್ರಮಾಣಕ್ಕೂ, ದೇಗುಲದಲ್ಲಿರುವ ಚಿನ್ನದ ಪ್ರಮಾಣಕ್ಕೂ ಗಣನೀಯ ವ್ಯತ್ಯಾಸ ಕಂಡುಬಂದಿದೆ. ಆಡಳಿತ ಮಂಡಳಿಯವರೇ, ನಿಖರ ದಾಖಲೆಗಳಿಲ್ಲದೆ ದೇಗುಲದಿಂದ ಚಿನ್ನ ಹಾಗೂ ಬೆಳ್ಳಿಯನ್ನು ಹೊರಗೆ ಕೊಂಡೊಯ್ದಿರುವ ಬಗ್ಗೆ ಇಲಾಖೆ ಅನುಮಾನ ವ್ಯಕ್ತಪಡಿಸಿದೆ. ಈ ಬಗ್ಗೆ ಕೇರಳದ ದೇವಸ್ವ ವಿಚಕ್ಷಣ ದಳಕ್ಕೆ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದೆ. ಹಾಗಾಗಿ, ಈ ದೂರುಗಳ ಆಧಾರದ ಮೇರೆಗೆ ಲೆಕ್ಕಪರಿಶೋಧನಾ ಇಲಾಖೆ ಕೂಲಂಕಷ ತಪಾಸಣೆ ನಡೆಸಲು ಮುಂದಾಗಿದೆ ಎಂದು ಇಲಾಖೆ ತಿಳಿಸಿದೆ.
ಇದಕ್ಕೂ ಮೊದಲು ದೇವಸ್ವಂ ವಿಚಕ್ಷಣ ದಳವು, ಸ್ಟ್ರಾಂಗ್ ರೂಂನಲ್ಲಿನ ಚಿನ್ನ, ಬೆಳ್ಳಿ ದೇಣಿಗೆಯ ದಾಸ್ತಾನುಗಳ ಬಗ್ಗೆ ದೇಗುಲದ ಆಡಳಿತ ಮಂಡಳಿ ಸಮರ್ಪಕ ದಾಖಲೆಗಳನ್ನು ಇಟ್ಟುಕೊಂಡಿಲ್ಲ ಎಂದು ಹೇಳಿತ್ತು. ಹಾಗಾಗಿ, ಲೆಕ್ಕಪರಿಶೋಧನಾ ಇಲಾಖೆ, ಚಿನ್ನ, ಬೆಳ್ಳಿ ದೇಣಿಗೆಗಳನ್ನು ಸಂರಕ್ಷಿಸುವಲ್ಲಿ ದೇಗುಲ ಆಡಳಿತ ಮಂಡಳಿ ನಿಯಮಗಳನ್ನು ಪಾಲಿಸಿದೆಯೇ ಇಲ್ಲವೇ ಎಂಬುದರ ಬಗ್ಗೆಯೂ ಗಮನ ಹರಿಸಲಿದೆ ಎನ್ನಲಾಗಿದೆ.
ಶಬರಿಮಲೆ ದೇಗುಲಕ್ಕೆ ಬರುವ ಎಲ್ಲಾ ದೇಣಿಗೆಗಳನ್ನು ಆರಾನ್ಮುಲಾ ದೇಗುಲದ ಬಳಿಯಿರುವ ತಿರುವಾಂಕೂರು ದೇವಸ್ವಂ ಮಂಡಳಿಯ ಸ್ಟ್ರಾಂಗ್ ರೂಂನಲ್ಲಿ ಇಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.