ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಆಸ್ಪತ್ರೆಗೆ ದಾಖಲು
Team Udayavani, Jun 12, 2022, 7:37 PM IST
ಚಂಡೀಗಢ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ,ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ (94) ಅವರನ್ನು ಮೊಹಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷದ ವಕ್ತಾರರು ಭಾನುವಾರ ತಿಳಿಸಿದ್ದಾರೆ.
ಪಂಜಾಬ್‌ನ ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಅವರು ಶನಿವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಗ್ಯಾಸ್ಟ್ರಿಕ್ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದಅವರು ಜೂನ್ 6 ರಂದು ಇಲ್ಲಿನ PGIMER ಗೆ ದಾಖಲಾಗಿದ್ದರು. ಮರುದಿನ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು.
ಈ ವರ್ಷದ ಆರಂಭದಲ್ಲಿ ಬಾದಲ್ ಕೋವಿಡ್-19 ಸೋಂಕಿಗೆ ಒಳಗಾಗಿದ್ದರು. ಫೆಬ್ರವರಿಯಲ್ಲಿ, ಅವರನ್ನು ಆರೋಗ್ಯ ತಪಾಸಣೆಗಾಗಿ ಮೊಹಾಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೃದಯ ಮತ್ತು ಶ್ವಾಸಕೋಶದ ತಪಾಸಣೆಗೆ ಒಳಗಾಗಿದ್ದರು.
ಇದನ್ನೂ ಓದಿ:ಹಿಮಾಚಲ ಪ್ರದೇಶ: ಕಾರು ಕಮರಿಗೆ ಬಿದ್ದು ತಂದೆ ಸಾವು, 2 ಮಕ್ಕಳಿಗೆ ಗಂಭೀರ ಗಾಯ
ಕೋವಿಡ್-19 ಸೋಂಕಿಗೆ ಒಳಗಾದ ನಂತರ ಎರಡು ವಾರಕ್ಕೊಮ್ಮೆ ಅಥವಾ ಮೂರು ವಾರಕ್ಕೊಮ್ಮೆ ಮುನ್ನೆಚ್ಚರಿಕೆ ತಪಾಸಣೆಗಳನ್ನು ಮಾಡಿಕೊಳ್ಳುವಂತೆ ಬಾದಲ್ ಅವರಿಗೆ ವೈದ್ಯರು ಈ ಹಿಂದೆ ಸಲಹೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.