Sadhguru ಜಗ್ಗಿ ವಾಸುದೇವ್ ಮೆದುಳಿನಲ್ಲಿ ತೀವ್ರ ರಕ್ತಸ್ರಾವ: ತುರ್ತು ಶಸ್ತ್ರಚಿಕಿತ್ಸೆ
Team Udayavani, Mar 20, 2024, 8:34 PM IST
ಹೊಸದಿಲ್ಲಿ: ಆಧ್ಯಾತ್ಮಿಕ ಗುರು ಮತ್ತು ಇಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ತೀವ್ರ ಅನಾರೋಗ್ಯಕ್ಕೆ ಗುರಿಯಾಗಿ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಸದ್ಗುರು ಜಗ್ಗಿ ವಾಸುದೇವ್ ಅವರ ಸಾಮಾಜಿಕ ಮಾಧ್ಯಮದಲ್ಲಿ ಈ ವಿಚಾರವನ್ನು ಪ್ರಕಟಿಸಲಾಗಿದ್ದು, ಮೆದುಳಿನಲ್ಲಿ ಭಾರೀ ಊತ ಮತ್ತು ರಕ್ತಸ್ರಾವದ ನಂತರ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ತೀವ್ರ ತಲೆನೋವಿನಿಂದ ಆಸ್ಪತ್ರೆಗೆ ದಾಖಲಾಗುವ ಮೊದಲು ಸದ್ಗುರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವನ್ನು ಅನುಭವಿಸಿದರು ಎಂದು ಹೇಳಿಕೆ ತಿಳಿಸಿದೆ. ಮಾರ್ಚ್ 17 ರಂದು ರಕ್ತಸ್ರಾವವನ್ನು ನಿವಾರಿಸಲು ಅಪೋಲೋ ಆಸ್ಪತ್ರೆಯಲ್ಲಿ ತಲೆಬುರುಡೆ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ.
”ತೀವ್ರ ತಲೆನೋವಿನ ಹೊರತಾಗಿಯೂ ಸದ್ಗುರುಗಳು ತಮ್ಮ ಕಾರ್ಯಕ್ರಮಗಳನ್ನು ಮುಂದುವರೆಸಿದರು.ಮಾರ್ಚ್ 17 ರಂದು, ಸ್ಥಿತಿಯು ತೀವ್ರವಾಗಿ ಹದಗೆಟ್ಟಿತು, ತೀವ್ರ ವಾಂತಿಯೊಂದಿಗೆ ತಲೆನೋವು ಉಲ್ಬಣಗೊಂಡಿತು. ತಲೆಬುರುಡೆಯಲ್ಲಿನ ರಕ್ತಸ್ರಾವವ ನಿಲ್ಲಿಸಲು ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದರು”ಎಂದು ಇಶಾ ಫೌಂಡೇಶನ್ ಹೇಳಿದೆ
ಶಸ್ತ್ರಚಿಕಿತ್ಸೆಯ ನೇತೃತ್ವ ವಹಿಸಿದ್ದ ಡಾ ವಿನಿತ್ ಸೂರಿ, ಸದ್ಗುರುಗಳು ಸ್ಥಿರವಾದ ಪ್ರಗತಿಯನ್ನು ತೋರಿಸಿದ್ದಾರೆ ಮತ್ತು ಅವರ ಮೆದುಳು, ದೇಹ ಮತ್ತು ಪ್ರಮುಖ ನಿಯತಾಂಕಗಳು ಸಾಮಾನ್ಯ ಮಟ್ಟಕ್ಕೆ ಸುಧಾರಿಸಿದೆ ಎಂದು ಹೇಳಿದ್ದಾರೆ. ಸದ್ಗುರು ಅವರು ನಗುನಗುತ್ತಾ ಮಾತನಾಡಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಮೋದಿ ಕರೆ
“ಸದ್ಗುರು ಜಗ್ಗಿ ವಾಸುದೇವ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಿದ್ದೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
#WATCH | Spiritual guru and founder of the Isha Foundation, Sadhguru Jaggi Vasudev, has undergone emergency brain surgery at Apollo Hospital in Delhi after massive swelling and bleeding in his brain.
(Video source: Sadhguru Jaggi Vasudev’s social media handle) pic.twitter.com/ll7I8sGP7o
— ANI (@ANI) March 20, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.