ಹೇಮಂತ್ ಕರ್ಕರೆ ಸಾವಿಗೆ ನನ್ನ ಶಾಪ ಕಾರಣ: ಪ್ರಗ್ಯಾ ಠಾಕೂರ್
‘ನೀವು ನಾಶವಾಗಿ ಹೋಗುತ್ತೀರಿ’ ಎಂದು ಶಾಪ ನೀಡಿದ್ದೆ ಎಂದು ಹೇಳಿರುವುದಾಗಿ ಸಾಧ್ವಿ ಇದೀಗ ಮತ್ತೆ ನೆನಪಿಸಿಕೊಂಡಿದ್ದಾರೆ...
Team Udayavani, Apr 19, 2019, 3:11 PM IST
ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಎದುರಾಳಿಯಾಗಿ ಭಾರತೀಯ ಜನತಾ ಪಕ್ಷದಿಂದ ಕಣಕ್ಕಿಳಿದರುವ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಾಗಿದ್ದಾರೆ.
2008ರ ಮುಂಬಯಿ ಉಗ್ರದಾಳಿ ಸಂದರ್ಭದಲ್ಲಿ ಆಗ ಮಹಾರಾಷ್ಟ್ರ ಎ.ಟಿ.ಎಸ್. ಮುಖ್ಯಸ್ಥರಾಗಿದ್ದ ಹೇಮಂತ ಕರ್ಕರೆ ಅವರು ಈ ದಾಳಿಯಲ್ಲಿ ಜೀವ ಕಳೆದುಕೊಂಡಿದ್ದು ತಮ್ಮ ಶಾಪದ ಕಾರಣದಿಂದಲೇ ಎಂದು ಸಾಧ್ವಿ ಪ್ರಗ್ಯಾ ಹೇಳಿಕೆ ನೀಡಿದ್ದಾರೆ.
2008ರ ಮಾಲೆಗಾಂವ್ ಬಾಂಬ್ ನ್ಪೋಟದಲ್ಲಿ ಪ್ರಗ್ಯಾ ಸಿಂಗ್ ಆರೋಪಿಯಾಗಿದ್ದ ಪ್ರಕರಣದ ತನಿಖೆಯನ್ನು ಕರ್ಕರೆ ಅವರು ನಡೆಸುತ್ತಿದ್ದರು. ‘ನನ್ನ ವಿರುದ್ಧ ಸಾಕ್ಷಿಗಳು ಇಲ್ಲದಿದ್ದಲ್ಲಿ ನನ್ನನ್ನು ಬಿಟ್ಟುಬಿಡುವಂತೆ ಹೇಮಂತ್ ಕರ್ಕರೆಗೆ ನಾನು ಹೇಳಿದಾಗ ಅವರು ನನ್ನ ವಿರುದ್ಧ ಸಾಕ್ಷಿಗಳನ್ನು ತರುತ್ತೇನೆ ಆದರೆ ನಿನ್ನನ್ನು ಬಿಟ್ಟುಬಿಡುವುದಿಲ್ಲ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ನಾನು ಅವರಿಗೆ ‘ನೀವು ನಾಶವಾಗಿ ಹೋಗುತ್ತೀರಿ’ ಎಂದು ಶಾಪ ನೀಡಿದ್ದೆ ಎಂದು ಹೇಳಿರುವುದಾಗಿ ಸಾಧ್ವಿ ಇದೀಗ ಮತ್ತೆ ನೆನಪಿಸಿಕೊಂಡಿದ್ದಾರೆ.
#WATCH Pragya Singh Thakur:Maine kaha tera (Mumbai ATS chief late Hemant Karkare) sarvanash hoga.Theek sava mahine mein sutak lagta hai. Jis din main gayi thi us din iske sutak lag gaya tha.Aur theek sava mahine mein jis din atankwadiyon ne isko maara, us din uska anth hua (18.4) pic.twitter.com/COqhEW2Bnc
— ANI (@ANI) April 19, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.