ಮುಂಬಯಿಯಲ್ಲಿ ಕೇಸರಿ ಅಲೆ: ಮರಾಠರಿಗೆ ಮಣಿದ ಸರಕಾರ
Team Udayavani, Aug 10, 2017, 8:15 AM IST
ಮುಂಬಯಿ: ಸರಕಾರಿ ಉದ್ಯೋಗ ಮತ್ತು ಕಾಲೇಜು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬುಧವಾರ ಮಹಾರಾಷ್ಟ್ರದ ಮರಾಠ ಸಮುದಾಯ ಮುಂಬಯಿಯ ಬೀದಿಗಳಲ್ಲಿ ಬೃಹತ್ ಮೌನ ಪ್ರತಿಭಟನ ರ್ಯಾಲಿ ನಡೆಸಿತು. ಇದರಲ್ಲಿ ಕೇಸರಿ ಬಾವುಟ ಹಿಡಿದು ಕೊಂಡ 9 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು, ಇಡೀ ಆಜಾದ್ ಮೈದಾನ ಕೇಸರಿಮಯವಾಯಿತು.
ಮರಾಠ ಸಮುದಾಯದ ಈ ಬಲ ಪ್ರದರ್ಶನಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಮಣಿದಿದ್ದು, ಮುಖ್ಯ ಬೇಡಿಕೆಗಳನ್ನು ಈಡೇರಿಸು ವುದಾಗಿ ಭರವಸೆ ನೀಡಿದ್ದಾರೆ. ಶಿಕ್ಷಣದಲ್ಲಿ ಇತರ ಹಿಂದುಳಿದ ವರ್ಗಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಮರಾಠರಿಗೂ ವಿಸ್ತರಿಸುವುದಾಗಿ ಮತ್ತು ಭೂಮಿ ನೀಡುವುದಾಗಿ ಫಡ್ನವೀಸ್ ಆಶ್ವಾಸನೆಯಿತ್ತಿದ್ದಾರೆ. ಅಷ್ಟರ ಮಟ್ಟಿಗೆ ಈ ಪ್ರತಿಭಟನೆ ಯಶಸ್ವಿಯಾಗಿದ್ದು, ಇದು ಈ ವರ್ಷ ಮರಾಠ ಸಮುದಾಯ ನಡೆಸಿದ 58ನೇ ಪ್ರತಿಭಟನ ಸಮಾವೇಶವಾಗಿತ್ತು. ಪ್ರತಿಭಟನೆ ಶಾಂತಿಯುತ ವಾಗಿ ನಡೆಯಿತಾದರೂ ಸಂಚಾರ ತೀವ್ರ ಅಸ್ತವ್ಯಸ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.