ಗೋವಾದ ಕಲಾವಿದ ಸಾಗರ್ ಸುರೇಶ್ ನಾಯ್ಕ್ ಚಿತ್ರಕಲೆಯನ್ನು ಹೊಗಳಿದ ಪ್ರಧಾನಿ ಮೋದಿ
Team Udayavani, Dec 28, 2021, 12:46 PM IST
ಪಣಜಿ: ಗೋವಾದ ಪೊಂಡಾ ಅಡಪೈ ನಿವಾಸಿ ಚಿತ್ರ ಕಲಾವಿದ ಸಾಗರ್ ಸುರೇಶ್ ನಾಯ್ಕ್ ರವರು ಕಣ್ಮರೆಯಾಗುತ್ತಿರುವ ಅಪರೂಪದ ಚಿತ್ರ ಕಲೆ ಪ್ರಕಾರವನ್ನು ಜೀವಂತವಾಗಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮನ್‍ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿರುವುದು ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.
ಗೋವಾ ಕಾಲೇಜ್ ಆಪ್ ಆಟ್ರ್ಸನಿಂದ ಬ್ಯಾಚುಲರ್ ಆಫ್ ಪೈನ್ ಆರ್ಟ್ಸ್ ಪದವಿ ಪಡೆದು, ಹೈದರಾಬಾದ್‍ನಲ್ಲಿ ಉನ್ನತ ಶಿಕ್ಷಣ ಪಡೆದು ಗೋವಾಕ್ಕೆ ಮರಳಿ ಗೋವಾದಲ್ಲಿ ಚಿತ್ರಕಲೆ ಮತ್ತು ಛಾಯಾಗ್ರಹಣ ಆರಂಭಿಸಿ ಇದುವರೆಗೂ ಇವರು 5 ಗೋವಾ ರಾಜ್ಯ ಮಟ್ಟದ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಇವರ ಚಿತ್ರಗಳು ಹಳ್ಳಿಗಳ ಸೌಂದರ್ಯ ವಿವರಿಸುತ್ತವೆ. ಇವರು ಬಿಡಿಸಿದ ವರ್ಣ ಚಿತ್ರಗಳು ಮತ್ತು ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳು ಹೆಚ್ಚಿನ ಪ್ರಸಿದ್ಧಿ ಪಡೆದಿವೆ. ಕಣ್ಮರೆಯಾಗುತ್ತಿರುವ ಇಂತಹ ಕಲಾ ಪ್ರಕಾರವನ್ನು ಜೀವಂತವಾಗಿರಿಸಲು ಸಾಗರ್ ರವರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ಮನ್‍ಕಿ ಬಾತ್‍ನಲ್ಲಿ ಪ್ರಸ್ತಾಪಿಸಿರುವುದು ರಾಜ್ಯಾದ್ಯಂತ ಸಾಗರ್ ರವರ ಕಲೆಯ ಬಗ್ಗೆ ಇನ್ನಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.