“ಸಕ್ಷಮ್ ರಾಷ್ಟ್ರೀಯ ಸ್ಪರ್ಧೆ’ ವಿಜೇತರ ವಿದೇಶ ಪ್ರವಾಸ
Team Udayavani, Aug 1, 2017, 11:33 AM IST
ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಮಿತ ಬಳಕೆ ಮೂಲಕ ಪರಿಸರ ರಕ್ಷಣೆ ಹಾಗೂ ಜಾಗೃತಿ ಮೂಡಿಸಲು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಪಿಸಿಆರ್‌ಎ ಸಕ್ಷಮ್ ರಾಷ್ಟ್ರೀಯ ಸ್ಪರ್ಧೆ-2017 ಅನ್ನು ಪೆಟ್ರೋಲಿಯಂ ಸಂರಕ್ಷಣಾ ಸಂಶೋಧನಾ ಸಂಸ್ಥೆ (ಪಿಸಿಆರ್‌ಎ) ಆಯೋಜಿಸಿದೆ.
ಸಕ್ಷಮ್ ರಾಷ್ಟ್ರೀಯ ಸ್ಪರ್ಧೆಯ 2016ರ ವಿಜೇತ ತಂಡವನ್ನು ದೆಹಲಿಯಲ್ಲಿ ಕೇಂದ್ರ ಇಂಧನ ರಾಜ್ಯ ಖಾತೆ ಸಚಿವ ಧಮೇಂದ್ರ ಪ್ರಧಾನ್ ಅವರು ಸನ್ಮಾನಿಸಿದರು. ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ 1.60 ಕೋಟಿ ಮೌಲ್ಯದ ಪ್ರಶಸ್ತಿಗಳನ್ನು (ಲ್ಯಾಪ್‌ಟಾಪ್, ಟ್ಯಾಬ್ಲೆಟ್, ನಗದು ಬಹುಮಾನ ಸೇರಿದಂತೆ ಜಪಾನ್ ದೇಶ ಪ್ರವಾಸ ಅವಕಾಶ) ನೀಡಿ ಗೌರವಿಸಿದರು.
ಪೆಟ್ರೋಲಿಯಂ ಉತ್ಪನ್ನಗಳ ಸಂರಕ್ಷಣೆ ಮತ್ತು ಪರಿಸರ ರಕ್ಷಣೆ ಪ್ರಮುಖ ಉದ್ದೇಶದಿಂದ ಪ್ರತಿ ವರ್ಷ ಆಯೋಜಿಸುವ ಈ ಸ್ಪರ್ಧೆಗೆ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಸಹಯೋಗವಿದೆ. 2017ರ ಸಕ್ಷಮ ರಾಷ್ಟ್ರೀಯ ಸ್ಪರ್ಧೆಯನ್ನು ದೇಶಾದ್ಯಂತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಶಾಲೆಗಳಿಗೆ ವಿಸ್ತರಿಸುವ ಮೂಲಕ ಒಂದು ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡುವ ಉದ್ದೇಶವೂ ಸಂಸ್ಥೆಗಿದೆ ಎಂದು ಅವರು ತಿಳಿಸಿದರು.
ಈ ಸಾಲಿನಲ್ಲಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ಸಿಂಗಾಪುರ ಪ್ರವಾಸ, ಲ್ಯಾಪ್‌ಟಾಪ್, ಟ್ಯಾಬ್ಲೆಟ್, ನಗದು ಹಾಗೂ ಗಿಫ್ಟ್ ವೋಚರ್ ಹಾಗೂ ಪ್ರಮಾಣಪತ್ರ ನೀಡುವ ಯೋಜನೆಯಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು, ಶಾಲೆಗಳು www.pcracompetitions. org www.pcra.org/competitions. html ಹಾಗೂ ಮೊಬೈಲ್ ಆ್ಯಪ್ pcracompetitions ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.