Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Team Udayavani, Oct 24, 2024, 11:07 AM IST
ಮುಂಬೈ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯ ಎಂದು ಹೇಳಿಕೊಂಡು ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ (ಅ.23) ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜಾರ್ಖಂಡ್‌ನ ಜೆಮ್‌ಶೆಡ್‌ಪುರದ ತರಕಾರಿ ವ್ಯಾಪಾರೀ ಶೇಖ್ ಹುಸೇನ್ ಶೇಖ್ ಮೌಸಿನ್ (24) ಎಂದು ಗುರುತಿಸಲಾಗಿದೆ.
ಕಳೆದ ಅಕ್ಟೋಬರ್ 18 ರಂದು ನಗರದ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ವಾಟ್ಸ್ ಆಪ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದ ವ್ಯಕ್ತಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ ಅವರು 5 ಕೋಟಿ ಪಾವತಿಸಬೇಕು. ಒಂದು ವೇಳೆ ಹಣ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್ ಗಿಂತ ಕೆಟ್ಟದಾಗುತ್ತದೆ,’’ ಎಂದು ಸಂದೇಶ ಕಳುಹಿಸಿದ್ದ ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂಬೈ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಪೊಲೀಸರ ಕಾರ್ಯಾಚರಣೆ ವೇಳೆ ಆರೋಪಿ ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿರುವುದು ಗೊತ್ತಾಗಿದೆ ಅದರಂತೆ ಅಲ್ಲಿನ ಪೊಲೀಸರ ಸಹಕಾರದೊಂದಿಗೆ ಆರೋಪಿಯನ್ನು ಬುಧವಾರ ಬಂಧಿಸಿದ್ದು ಗುರುವಾರ ಮುಂಬೈಗೆ ಕರೆತರಲಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.