ತಾಲಿಬಾನಿಗಳನ್ನು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಸಿದ SP ಪಕ್ಷದ ಸಂಸದ ಶಫಿಕರ್
Team Udayavani, Aug 17, 2021, 9:30 PM IST
ಲಖನೌ : ಅಫ್ಗಾನಿಸ್ತಾನವನ್ನು ತಮ್ಮ ವಶಕ್ಕೆ ಪಡೆದಿರುವ ತಾಲಿಬಾನ್ ನಡೆಯನ್ನು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಹಿರಿಯ ಸಂಸದ ಶಫಕರ್ ರೆಹಮಾನ್ ಬರ್ಗ್ ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ತಾಲಿಬಾನಿಗಳನ್ನು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಸಿದ್ದಾರೆ.
ಇಂದು ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಸಂಸದ ಬರ್ಗ್, ʼತಾಲಿಬಾನ್ ಹೋರಾಟ ಆ ದೇಶ ಮತ್ತು ಆಫ್ಗನ್ನರ ಸ್ವಾತಂತ್ರ್ಯಕ್ಕಾಗಿʼ ನಡೆಯುತ್ತಿದೆ. ಭಾರತದಲ್ಲಿ ಬ್ರಿಟಿಷರ ಅಡಳಿತ ಇದ್ದಾಗ, ನಮ್ಮ ದೇಶ ಸ್ವಾತಂತ್ಯ್ರಕ್ಕಾಗಿ ಹೋರಾಟ ನಡೆಸಿತ್ತು. ಈಗ ತಾಲಿಬಾನ್ ಸಹ ತಮ್ಮ ದೇಶವನ್ನು ಸ್ವತಂತ್ರಗೊಳಿಸಲು ಬಯಸುತ್ತಿದೆ. ಬಲಿಷ್ಠ ಶಕ್ತಿಯಾಗಿರುವ ತಾಲಿಬಾನ್, ರಷ್ಯಾ ಮತ್ತು ಅಮೆರಿಕದಂತಹ ಪ್ರಬಲ ದೇಶಗಳು ಅಫ್ಗಾನ್‌ನಲ್ಲಿ ನೆಲೆಗೊಳ್ಳಲು ಅವಕಾಶ ನೀಡಲು ಇಚ್ಚಿಸುತ್ತಿಲ್ಲʼ ಎಂದು ಶ್ಲಾಘಿಸಿದ್ದಾರೆ.
ʼಅಫ್ಗಾನಿಸ್ತಾನ ಸ್ವಾಂತಂತ್ರ್ಯವು ಆ ದೇಶದ ಆಂತರಿಕ ವಿಚಾರ. ಅಮೆರಿಕ ಏಕೆ ಅಫ್ಗಾನಿಸ್ತಾನದಲ್ಲಿ ಆಡಳಿತ ನಡೆಸಬೇಕು? ತಾಲಿಬಾನ್ ಅಲ್ಲಿ ಒಂದು ಶಕ್ತಿಯಾಗಿದೆ ಮತ್ತು ಆಫ್ಗನ್ನರು ಅದರ ನೇತೃತ್ವದಲ್ಲಿ ಸ್ವತಂತ್ರರಾಗಲು ಬಯಸುತ್ತಿದ್ದಾರೆʼ ಎಂದಿದ್ದಾರೆ.
ಬರ್ಗ್ ಹೇಳಿಕೆಗೆ ವ್ಯಾಪಕ ಖಂಡನೆ :
ಇನ್ನು ತಾಲಿಬಾನ್ ಉಗ್ರರನ್ನು ಬೆಂಬಲಿಸಿರುವ ಬರ್ಗ್ ಅವರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. ‘ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮತ್ತು ಎಸ್‌ಪಿ ನಾಯಕರ ನಡುವೆ ಯಾವುದೇ ವ್ಯತ್ಯಾಸಗಳಿಲ್ಲ ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೆ.ಪಿ.ಮೌರ್ಯ ಟೀಕಿಸಿದ್ದಾರೆ.
ಸಮಾಜವಾದಿ ಪಕ್ಷದವರು ಏನು ಬೇಕಾದರೂ ಹೇಳುತ್ತಾರೆ. ತಾಲಿಬಾನ್ ಬಗ್ಗೆ ಎಸ್‌ಪಿ ಇಂತಹ ಹೇಳಿಕೆ ನೀಡಬಹುದಾದರೆ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮತ್ತು ಎಸ್‌ಪಿ ನಾಯಕರ ನಡುವೆ ವ್ಯತ್ಯಾಸವೇನಿದೆ?ʼ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.