ಸನಾತನ ಧರ್ಮವೇ ಭಾರತದ ರಾಷ್ಟ್ರೀಯ ಧರ್ಮ: ಯೋಗಿ ಆದಿತ್ಯನಾಥ್
Team Udayavani, Jan 28, 2023, 1:34 PM IST
ಜೈಪುರ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ “ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮ” ಎಂದು ಹೇಳಿದರು.
ರಾಜಸ್ಥಾನದ ಭಿನ್ಮಾಲ್ ನ ನೀಲಕಂಠ ಮಹಾದೇವ ದೇವಾಲಯದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಎಲ್ಲಾ ನಾಗರಿಕರು ಅದನ್ನು ಪಾಲಿಸಬೇಕೆಂದು ಒತ್ತಾಯಿಸಿದರು.
ಅಯೋಧ್ಯೆಯ ರಾಮ ಮಂದಿರದ ಮಾದರಿಯಲ್ಲಿ ಹಾನಿಗೀಡಾದ ಪವಿತ್ರ ಸ್ಥಳಗಳನ್ನು ಪುನರ್ ನಿರ್ಮಾಣ ಮಾಡಲು ಅಭಿಯಾನವನ್ನು ಪ್ರಾರಂಭಿಸುವಂತೆ ಸಿಎಂ ಯೋಗಿ ಅವರು ಜನರನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಿಎಂ ಯೋಗಿ ಮತ್ತು ಕೇಂದ್ರ ಜಲವಿದ್ಯುತ್ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರುದ್ರಾಕ್ಷಿಯನ್ನು ನೆಟ್ಟರು.
ಯಾವುದೇ ಅವಧಿಯಲ್ಲಿ ನಮ್ಮ ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನದಿಂದ 500 ವರ್ಷಗಳ ನಂತರ ಭವ್ಯವಾದ ರಾಮನ ಮಂದಿರ ನಿರ್ಮಾಣ ನಡೆಯುತ್ತಿರುವ ಅಯೋಧ್ಯೆಯ ಮಾದರಿಯಲ್ಲಿ ಅವುಗಳ ಜೀರ್ಣೋದ್ಧಾರಕ್ಕಾಗಿ ಅಭಿಯಾನವನ್ನು ಪ್ರಾರಂಭಿಸಬೇಕು. ರಾಷ್ಟ್ರೀಯ ಭಾವನೆಯನ್ನು ಪ್ರತಿನಿಧಿಸುವ ಭಗವಾನ್ ರಾಮನ ಈ ಭವ್ಯವಾದ ರಾಷ್ಟ್ರೀಯ ದೇವಾಲಯದ ನಿರ್ಮಾಣಕ್ಕೆ ನೀವೆಲ್ಲರೂ ಭಕ್ತರು ಕೊಡುಗೆ ನೀಡಿದ್ದೀರಿ ಎಂದು ಯೋಗಿ ಆದಿತ್ಯನಾಥ್ ಹೇಳಿದರು.
ಇದನ್ನೂ ಓದಿ:ಬೆಂಗಳೂರು: 7ನೇ ಕ್ಲಾಸ್ ಓದಿದ್ದ ವ್ಯಕ್ತಿ ಯೂಟ್ಯೂಬ್ ನೋಡಿ ಖೋಟಾನೋಟು ಸೃಷ್ಟಿಸಿದ!
“ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪರಂಪರೆಯನ್ನು ಗೌರವಿಸುವ ಮತ್ತು ಅದನ್ನು ಸಂರಕ್ಷಿಸುವ ಪ್ರತಿಜ್ಞೆಯನ್ನು ಇಡೀ ದೇಶಕ್ಕೆ ಮಾಡಿದ್ದಾರೆ ಎಂದು ಸಿಎಂ ಯೋಗಿ ಹೇಳಿದರು. 1400 ವರ್ಷಗಳ ನಂತರ ಭಗವಾನ್ ನೀಲಕಂಠನ ದೇವಾಲಯವನ್ನು ಮತ್ತೊಮ್ಮೆ ಭವ್ಯವಾಗಿ ಜೀರ್ಣೋದ್ಧಾರ ಮಾಡಿರುವುದು ಪರಂಪರೆಯ ಗೌರವ ಮತ್ತು ರಕ್ಷಣೆಗೆ ಉದಾಹರಣೆಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.