ಶಾರದಾ ಚಿಟ್ ಫಂಡ್ ಹಗರಣ; ಅರ್ಜಿ ವಜಾ- ಮಾಜಿ ಪೊಲೀಸ್ ಕಮಿಷನರ್ ಗೆ ಬಂಧನ ಭೀತಿ
Team Udayavani, Sep 13, 2019, 6:33 PM IST
ಕೋಲ್ಕತಾ:ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾದ ಮಾಜಿ ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ ಅವರನ್ನು ಬಂಧಿಸದಂತೆ ತಡೆ ನೀಡಿದ್ದ ಆದೇಶವನ್ನು ಕೋಲ್ಕತಾ ಹೈಕೋರ್ಟ್ ಶುಕ್ರವಾರ ತೆರವುಗೊಳಿಸಿದ್ದು, ಇದರಿಂದ ರಾಜೀವ್ ಕುಮಾರ್ ಬಂಧನ ಭೀತಿಗೊಳಗಾಗಿದ್ದಾರೆ.
ತಮ್ಮನ್ನು ವಿಚಾರಣೆಗೊಳಪಡಿಸಲು ಸಿಬಿಐ ಹಾಜರಾಗುವಂತೆ ನೀಡಿರುವ ನೋಟಿಸ್ ಅನ್ನು ಪ್ರಶ್ನಿಸಿ ರಾಜೀವ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಅರ್ಜಿದಾರರ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ತಮ್ಮನ್ನೇ ಟಾರ್ಗೆಟ್ ಮಾಡಿದ್ದಾರೆ ಎಂಬ ದೂರು ಸತ್ಯವಲ್ಲ. ಸಿಬಿಐ ನೋಟಿಸ್ ಜಾರಿಗೊಳಿಸುವುದನ್ನು ದುರುದ್ದೇಶ ಎಂದು ಅರ್ಥೈಸಿಕೊಳ್ಳಬಾರದು ಎಂದು ಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.
ಒಂದು ವೇಳೆ ನಾವು ಈಗ ಬಂಧನ ಅಥವಾ ತನಿಖೆಗೆ ನೀಡಿದ್ದ ರಕ್ಷಣೆಯನ್ನು ತೆರವುಗೊಳಿಸದೇ ಇದ್ದಲ್ಲಿ, ಬಳಿಕ ನಾವು ತನಿಖೆ ವೇಳೆ ಮಧ್ಯಪ್ರವೇಶಿಸಬೇಕಾಗುತ್ತದೆ ಎಂದು ಕೋಲ್ಕತಾ ಹೈಕೋರ್ಟ್ ತೀರ್ಪು ಪ್ರಕಟಿಸುತ್ತಾ ಉಲ್ಲೇಖಿಸಿದೆ.
ಈ ಹಿನ್ನೆಲೆಯಲ್ಲಿ ಶಾರದಾ ಚಿಟ್ ಫಂಡ್ ಪ್ರಕರಣದಲ್ಲಿ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಕುಮಾರ್ ಬಂಧನಕ್ಕೆ ಸಿಬಿಐಗೆ ಮುಕ್ತ ಅವಕಾಶ ಒದಗಿಸಿಕೊಟ್ಟಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.