ಶಶಿಕಲಾ v/s ಪನ್ನೀರ್ ಸೆಲ್ವಂ; ಶಶಿಕಲಾ ವಿರುದ್ಧ ತನಿಖೆಗೆ ಆದೇಶ
Team Udayavani, Feb 8, 2017, 12:06 PM IST
ಚೆನ್ನೈ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ವಿರುದ್ಧ ತಿರುಗಿ ಬಿದ್ದಿರುವ ತಮಿಳುನಾಡಿನ ಮಾಜಿ(ಹಂಗಾಮಿ)ಮುಖ್ಯಮಂತ್ರಿಓ ಪನ್ನೀರ್ ಸೆಲ್ವಂ, ನನಗೆ ವಿಶ್ವಾಸವಿದೆ. ಸತ್ಯಕ್ಕೆ ಎಲ್ಲರೂ ಬೆಂಬಲ ನೀಡುತ್ತಾರೆ ಎಂದು ತಿಳಿಸಿದ್ದಾರೆ. ಜೊತೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಜೆ.ಜಯಲಲಿತಾ ನಿಗೂಢ ಸಾವಿನ ಬಗ್ಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಆದೇಶ ನೀಡಿವುದಾಗಿ ಎಂದು ತಿಳಿಸಿದ್ದಾರೆ.
ಬುಧವಾರ ತಮ್ಮ ನಿವಾಸದ ಹೊರಭಾಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಜಯಲಲಿತಾ ಅವರ ಸಾವಿನ ಬಗ್ಗೆ ಅನುಮಾನ ಇದೆ. ಅಲ್ಲದೇ ಸತ್ಯವನ್ನು ಜನರಿಗೆ ತಿಳಿಸುವುದು ಸರ್ಕಾರದ ಕೆಲಸವಾಗಿದೆ. ಹಾಗಾಗಿ ಅಮ್ಮ ಅವರ ಸಾವಿನ ತನಿಖೆ ಬಗ್ಗೆ ನಿವೃತ್ತ ನ್ಯಾಯಾಧೀಶರ ಆಯೋಗವನ್ನು ರಚಿಸುವ ಅಗತ್ಯವಿದೆ. ಅದೇ ನಿಟ್ಟಿನಲ್ಲಿ ತನಿಖಾ ಸಮಿತಿಯೊಂದನ್ನು ರಚಿಸುವ ಅಗತ್ಯವಿದೆ ಎಂದರು.
ಬಳಿಕ ಸಮಿತಿ ಹೈಕೋರ್ಟ್ ಗೆ ವರದಿಯನ್ನು ನೀಡಬೇಕು, ಬಳಿಕ ಆ ವರದಿಯನ್ನು ಬಹಿರಂಗಗೊಳಿಸಬೇಕು ಎಂದು ಹೇಳಿದರು. ನಾನು ಯಾವತ್ತೂ ಎಐಎಡಿಎಂಕೆ ಪಕ್ಷಕ್ಕೆ ವಿಶ್ವಾಸದ್ರೋಹ ಎಸಗಿಲ್ಲ ಎಂದಿರುವ ಸೆಲ್ವಂ, ಪಕ್ಷದ ನೂತನ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಹಾಗೂ ಆಕೆಯ ಬೆಂಬಲಿಗರ ವಿರುದ್ಧ ವಾಗ್ದಾಳಿ ನಡೆಸಿದರು.
ನಾನು ಅಮ್ಮ ಅವರ ಮಾರ್ಗದರ್ಶನದಂತೆ ನಡೆಯುತ್ತಿದ್ದೇನೆ. ಮುಂದೆಯೂ ಅದೇ ರೀತಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು. ಜಯ ಅವರು ನನ್ನ 2 ಬಾರಿ ಸಿಎಂ ಆಗಿ ಮಾಡಿದ್ದರು. ಆದರೆ ಶಶಿಕಲಾ ಬಲವಂತವಾಗಿ ನನ್ನಿಂದ ರಾಜೀನಾಮೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಪನ್ನೀರ್ V/S ಶಶಿಕಲಾ ಬಲಪ್ರದರ್ಶನ
ಏತನ್ಮಧ್ಯೆ ನಿಮಗೆ ಎಷ್ಟು ಮಂದಿ ಶಾಸಕರ ಬೆಂಬಲ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ನನಗೆ ಎಷ್ಟು ಮಂದಿ ಬೆಂಬಲ ಇದೆ ಎಂಬುದನ್ನು ವಿಧಾನಸಭೆಯಲ್ಲಿ ತೋರಿಸುವೆ ಎಂದು ಸೆಲ್ವಂ ತಿರುಗೇಟು ನೀಡಿದ್ದಾರೆ.
ಮತ್ತೊಂದೆಡೆ ಬುಧವಾರ ಬೆಳಗ್ಗೆ ಎಐಎಡಿಎಂಕೆಯ 131 ಶಾಸಕರು ಶಶಿಕಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಮೂಲಕ ಬಲಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಬಿಜೆಪಿ ಕೈವಾಡ ಇಲ್ಲ:
ತಮಿಳುನಾಡಿನ ರಾಜಕೀಯ ಬೆಳವಣಿಗೆ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸೆಲ್ವಂ, ಸದ್ಯದ ರಾಜಕೀಯ ಗೊಂದಲಕ್ಕೆ ಬಿಜೆಪಿ ಕಾರಣವಲ್ಲ ಎಂದು ತಿಳಿಸಿದ್ದಾರೆ.
ಚಿನ್ನಮ್ಮಗೆ ಚುನಾವಣಾ ಆಯೋಗದ ಶಾಕ್:
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಆಯ್ಕೆ ಸರಿಯಾಗಿಲ್ಲ. ಶಶಿಕಲಾ ಅವರಿಗಾಗಿ ನಿಯಮಾವಳಿ ಉಲ್ಲಂಘಿಸಲಾಗಿದೆ ಎಂದು ಚುನಾವಣಾ ಆಯೋಗ ದೂರುವ ಮೂಲಕ ಆಯೋಗ ಶಶಿಕಲಾ ಅವರ ಪದೋನ್ನತಿಯನ್ನು ಪ್ರಶ್ನಿಸಿದೆ. ನಿಯಮಾವಳಿ ಉಲ್ಲಂಘಿಸಿ ಶಶಿಕಲಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಯೋಗ ಹೇಳಿದೆ.
ಪಕ್ಷದ ಒಗ್ಗಟ್ಟನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ: ಶಶಿಕಲಾ
ಪಕ್ಷದ ಒಗ್ಗಟ್ಟನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಿಯೋಜಿತ ಮುಖ್ಯಮಂತ್ರಿ ಶಶಿಕಲಾ ನಟರಾಜನ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ಪನ್ನೀರ್ ಸೆಲ್ವಂಗೆ ತಿರುಗೇಟು ನೀಡಿದ್ದಾರೆ. ಶಶಿಕಲಾ ನಟರಾಜನ್ ಅವರು ಪಕ್ಷದ ಕಚೇರಿಯಲ್ಲಿ ನಡೆಸಿದ್ದ ಮಹತ್ವದ ಸಭೆಗೆ ಎಐಎಡಿಎಂಕೆಯ 131 ಶಾಸಕರು ಹಾಜರಾಗಿದ್ದರು.
ಸಭೆ ನಡೆಸಿದ ಬಳಿಕ ಹೊರಬಂದ ಶಶಿಕಲಾ ಅವರು ಪಕ್ಷದ ಕಾರ್ಯಕರ್ತರತ್ತ ಕೈಬೀಸಿದರು. ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಪನ್ನೀರ್ ಸೆಲ್ವಂ ರಾಜೀನಾಮೆಗೆ ನಾನು ಯಾವುದೇ ಒತ್ತಡ ಹೇರಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.