‘ಸಾವಿತ್ರಿ ಉತ್ಸವ’ ಘೋಷಿಸಿದ ಮಹಾರಾಷ್ಟ್ರ ಸರ್ಕಾರ !
Team Udayavani, Dec 13, 2020, 5:40 PM IST
ಮುಂಬೈ: ಸಮಾಜದ ಒಳಿತಿಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಸಾವಿತ್ರಿಭಾಯಿ ಪುಲೆ ಅವರ ಜನ್ಮದಿನವನ್ನು ಪ್ರತಿವರ್ಷ ಆಚರಿಸಲಾಗುವುದು ಮತ್ತು ಇದಕ್ಕೆ ‘ಸಾವಿತ್ರಿ ಉತ್ಸವ’ ಎಂದು ನಾಮಕರಣ ಮಾಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
ಪ್ರತಿ ವರ್ಷದ ಜನವರಿ 3ರಂದು ಈ ಸಾವಿತ್ರಿ ಉತ್ಸವವನ್ನು ಹಮ್ಮಿಕೊಳ್ಳಲಾಗುವುದು ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಇದನ್ನೂ ಓದಿ:ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ವೈ ಸಂತಾಪ
ಸಾವಿತ್ರಿಭಾಯಿ ಪುಲೆ ಅವರು ಸಮಾಜದ ಸುಧಾರಣೆಯ ಸಲುವಾಗಿ ನಡೆಸಿದ ಹೋರಾಟ, ಅವರು ತಮ್ಮ ಬದುಕಿನಲ್ಲಿ ಮಾಡಿರುವ ಸಾಧನೆಗಳನ್ನು ಜನರಿಗೆ ತಿಳಿಸುವ ಉದ್ದೇಶ ಇದಾಗಿದ್ದು, ಸಾವಿತ್ರಿ ಉತ್ಸವದ ಅಂಗವಾಗಿ ರಾಜ್ಯದ ವಿವಿಧೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋವತಿ ಠಾಕೂರ್ ತಿಳಿಸಿದರು.
ಸಾವಿತ್ರಿಭಾಯಿ ಪುಲೆ ಅವರು 1831ರ ಜನವರಿಯಲ್ಲಿ ಜನಿಸಿದರು. ಮಹಿಳಾ ಸಬಲೀಕರಣ, ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹಲವು ಹೋರಾಟಗಳಲ್ಲಿ ಇವರು ಭಾಗವಹಿಸಿದ್ದ ಇವರು ಪತಿ ಜ್ಯೋತಿಬಾಪುಲೆ ಅವರೊಂದಿಗೆ ಸಾಮಾಜಿಕ ಸುಧಾರಣಾ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಅದರಲ್ಲೂ ಲಿಂಗ ಮತ್ತು ಜಾತಿ ಆಧಾರಿತವಾಗಿ ಸಮಾಜದಲ್ಲಿದ್ದ ತಾರತಮ್ಯವನ್ನು ಹೊಡೆದೋಡಿಸಲು ಇವರು ಮಾಡಿದ ಹೋರಾಟ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ, ಸಾವಿತ್ರಿಭಾಯಿ ಪುಲೆ ಅವರು 1897ರಲ್ಲಿ ಇಹಲೋಕ ತ್ಯೆಜಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.