ಜ.1ರಿಂದ ಎಸ್‌ಬಿಐ ATMಗಳಲ್ಲಿ OTP ಆಧರಿತ ವಿತ್‌ಡ್ರಾ
Team Udayavani, Dec 27, 2019, 8:33 PM IST
ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್‌ಗಳ (ಎಸ್‌ಬಿಐ)ಎಟಿಎಂಗಳಲ್ಲಿ ಹಣ ಹಿಂಪಡೆಯುವ ವ್ಯವಸ್ಥೆಯನ್ನು ಜ.1ರಿಂದ ಒನ್‌ಟೈಂ ಪಾಸ್‌ವರ್ಡ್ (ಒಟಿಪಿ) ಆಧಾರಿತ ಸೇವೆಯನ್ನಾಗಿ ಮಾರ್ಪಡಿಸುವುದಾಗಿ ಎಸ್‌ಬಿಐ ಪ್ರಕಟಿಸಿದೆ.
“ರಾತ್ರಿ 8ರಿಂದ ಬೆಳಗ್ಗೆ 8ರವರೆಗೆ 10,000 ರೂ.ಗಳಿಗಿಂತಲೂ ಹೆಚ್ಚು ಹಣ ವಿತ್‌ಡ್ರಾ ಮಾಡುವವರಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ. ಎಟಿಎಂ ಕಾರ್ಡ್‌ಗಳ ದುರ್ಬಳಕೆಯನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಟ್ವಿಟರ್‌ನಲ್ಲಿ ಬ್ಯಾಂಕ್ ಪ್ರಕಟಿಸಿದೆ.
ಏನಿದು ವ್ಯವಸ್ಥೆ?: ಎಟಿಎಂನಿಂದ ಹಣ ವಿತ್‌ಡ್ರಾ ಮಾಡುವವರು ಎಟಿಎಂ ಯಂತ್ರದಲ್ಲಿ ತಮ್ಮ ಪಿನ್ ಸಂಖ್ಯೆ, 10,000 ರೂ. ಅಥವಾ ಅದಕ್ಕಿಂತ ಹೆಚ್ಚು ಹಣವನ್ನು ನಮೂದಿಸಿದ ನಂತರ, ಗ್ರಾಹಕರ ಖಾತೆಯೊಂದಿಗೆ ಜೋಡಿಸಲ್ಪಟ್ಟಿರುವ ಅವರ ಮೊಬೈಲ್ ಸಂಖ್ಯೆಗೆ ನಾಲ್ಕು ಅಂಕಿಗಳ ಒಟಿಪಿ ರವಾನೆಯಾಗುತ್ತದೆ. ಆ ಸಂಖ್ಯೆಯನ್ನು ಎಟಿಎಂನಲ್ಲಿ ನಮೂದಿಸಿದ ನಂತರವಷ್ಟೇ ಗ್ರಾಹಕರು ತಾವು ಬಯಸಿದ ಹಣವನ್ನು ಪಡೆಯಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.