6 ತಿಂಗಳ ಗರ್ಭಿಣಿಗೆ ಗರ್ಭಪಾತಕ್ಕೆ ಸುಪ್ರೀಂ ಸಮ್ಮತಿ
Team Udayavani, Jan 17, 2017, 3:45 AM IST
ಹೊಸದಿಲ್ಲಿ: ಭಾರತದ ಸರ್ವೋಚ್ಚ ನ್ಯಾಯಾಲಯ ಸೋಮವಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಮುಂಬಯಿ ಮೂಲದ 24 ವಾರದ ಗರ್ಭಿಣಿಗೆ (6 ತಿಂಗಳು) ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.
ಭ್ರೂಣದ ತಲೆಬುರುಡೆ ಬೆಳೆದಿಲ್ಲದಿರುವುದರಿಂದ ಮಗು ಹುಟ್ಟಿದರೂ ಬದುಕುವುದಿಲ್ಲವೆಂದು ತಿಳಿದುಬಂದ ಹಿನ್ನೆಲೆಯಲ್ಲಿ ಮುಂಬಯಿ ಮೂಲದ 22 ವರ್ಷದ ಮಹಿಳೆ ಗರ್ಭಪಾತ ಮಾಡಿಸಿಕೊಳ್ಳಲು ಸರ್ವೋಚ್ಚ ನ್ಯಾಯಪೀಠಕ್ಕೆ ಈ ಹಿಂದೆ ಮನವಿ ಸಲ್ಲಿಸಿದ್ದರು. ಇದನ್ನು ನ್ಯಾಯಪೀಠ ಪರಿಗಣಿಸಿದೆ.
ಗರ್ಭಪಾತ ಕಾಯ್ದೆಯಡಿ ತನ್ನ ಜೀವವನ್ನುಳಿಸಿಕೊಳ್ಳುವ ಮಹಿಳೆಯ ಹಕ್ಕನ್ನು ಪರಿಗಣಿಸಿ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆಸ್ಪತ್ರೆಯ ವರದಿ ಪ್ರಕಾರ ಮಹಿಳೆ ಹೆರಿಗೆಯಾಗುವವರೆಗೆ ಕಾಯುವುದರಲ್ಲಿ ಅರ್ಥವಿಲ್ಲ. ಏಕೆಂದರೆ ಮಗು ಗರ್ಭದಿಂದ ಹೊರಬಂದರೂ ತಲೆಬುರುಡೆಯಿಲ್ಲದೇ ಬದುಕುವುದು ಅಸಾಧ್ಯ ಎಂದು ನ್ಯಾಯ ಪೀಠ ತಿಳಿಸಿದೆ.
20 ವಾರ ಮೇಲ್ಪಟ್ಟ ಭ್ರೂಣ ತೆಗೆಸಲು ಅವಕಾಶವಿಲ್ಲ. ಆದರೆ ತಾಯಿಯ ಜೀವಕ್ಕೇ ಕುತ್ತು ಬರುವುದಾದರೆ 20 ವಾರ ಮೇಲ್ಪಟ್ಟ ಭ್ರೂಣ ತೆಗೆಸಲು ಅದೇ ಕಾಯ್ದೆಯ ಸೆಕ್ಷನ್ 5ರಲ್ಲಿ ಅವಕಾಶವಿದೆ ಎಂದು 2016ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.