ಕೇರಳಕ್ಕೆ ತೆರಳಲು ಮದನಿಗೆ ಸುಪ್ರೀಂಕೋರ್ಟ್ ಅನುಮತಿ
Team Udayavani, Jul 18, 2023, 5:54 AM IST
ನವದೆಹಲಿ: 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಪ್ರಕರಣದ ಪ್ರಮುಖ ಅಪರಾಧಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)ನಾಯಕ ಅಬ್ದುಲ್ ನಾಸಿರ್ ಮದನಿ ಕೇರಳಕ್ಕೆ ತೆರಳಲು ಹಾಗೂ ಅಲ್ಲಿಯೇ ಇದ್ದು, ಚಿಕಿತ್ಸೆ ಪಡೆಯಲು ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿಸಿದೆ.
20 ಮಂದಿ ಗಾಯಗೊಂಡು, ಇಬ್ಬರನ್ನು ಬಲಿ ಪಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿದ್ದ ಮದನಿಗೆ 2014ರಲ್ಲಿ ಆತನ ಕ್ಷೀಣ ಆರೋಗ್ಯವನ್ನು ಪರಿಗಣಿಸಿ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ಆದರೆ, ಬೆಂಗಳೂರಿನಿಂದ ಹೊರಗೆ ಎಲ್ಲೂ ಪ್ರಯಾಣಿಸದಂತೆ ಷರತ್ತು ವಿಧಿಸಲಾಗಿತ್ತು. ಆದರೀಗ ಆತನ ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಚಿಕಿತ್ಸೆಗಾಗಿ ಹುಟ್ಟೂರಿಗೆ ತೆರಳಬೇಕೆಂದು ಮನವಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಹಾಗೂ ಎಂ.ಎಂ.ಸುಂದರೇಶ್ ಅವರ ನ್ಯಾಯಪೀಠವು ಮನವಿ ಆಲಿಸಿ, 2014ರ ಆದೇಶವನ್ನೇ ನವೀಕರಿಸಿ, ಮದನಿಗೆ ಕೇರಳಕ್ಕೆ ತೆರಳಲು ಅನುಮತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.