ರಾಜೀವ್ ಹಂತಕರ ಬಿಡುಗಡೆಯ ಸುಪ್ರೀಂ ತೀರ್ಪು ದುರದೃಷ್ಟಕರ: ಕಾಂಗ್ರೆಸ್ ಅಸಮಾಧಾನ
Team Udayavani, Nov 11, 2022, 4:10 PM IST
ನವದೆಹಲಿ :ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರು ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡುವಂತೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶವನ್ನು ಕಾಂಗ್ರೆಸ್ ಶುಕ್ರವಾರ ” ಸ್ವೀಕಾರಾರ್ಹವಲ್ಲ ಮತ್ತು ಸಂಪೂರ್ಣ ತಪ್ಪು. ಸುಪ್ರೀಂ ಕೋರ್ಟ್ ಈ ಸಮಸ್ಯೆ ಬಗ್ಗೆ ದೇಶದ ಮನೋಭಾವಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಿಲ್ಲ” ಎಂದು ಅಸಮಾಧಾನ ಹೊರ ಹಾಕಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನದ ಉಸ್ತುವಾರಿ ಜೈರಾಮ್ ರಮೇಶ್ ಈ ಬಗ್ಗೆ ಹೇಳಿಕೆ ನೀಡಿದ್ದು, ಮಾಜಿ ಪ್ರಧಾನಿಯ ಉಳಿದ ಹಂತಕರನ್ನು ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ ನ ನಿರ್ಧಾರವು “ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಸಂಪೂರ್ಣವಾಗಿ ತಪ್ಪು. ಕಾಂಗ್ರೆಸ್ ಪಕ್ಷವು ಅದನ್ನು ಸ್ಪಷ್ಟವಾಗಿ ಟೀಕಿಸುತ್ತದೆ. ಸಂಪೂರ್ಣವಾಗಿ ಅಸಮರ್ಥನೀಯವಾಗಿದೆ. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಭಾರತದ ಆತ್ಮ ಸಾಕ್ಷಿಯ ಅನುಗುಣವಾಗಿ ಕಾರ್ಯನಿರ್ವಹಿಸದಿರುವುದು ಅತ್ಯಂತ ದುರದೃಷ್ಟಕರ” ಎಂದಿದ್ದಾರೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್.ಪಿ.ರವಿಚಂದ್ರನ್ ಸೇರಿ ಆರು ಮಂದಿಯನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.ಅವಧಿಗೂ ಮುನ್ನ ಬಿಡುಗಡೆ ಕೋರಿ ನಳಿನಿ ಮತ್ತು ರವಿಚಂದ್ರನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ. ನಾಗರತ್ನ ಅವರ ಪೀಠವು ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಎ.ಜಿ. ಪೆರಾರಿವಾಲನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಎಲ್ಲರ ವಿಷಯದಲ್ಲಿ ಅನ್ವಯಿಸುತ್ತದೆ ಎಂದು ಹೇಳಿ, ಅಪರಾಧಿಗಳಾದ ನಳಿನಿ, ಸಂತನ್, ಮುರುಗನ್, ಶ್ರೀಹರನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಪೀಠವು ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.