SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Team Udayavani, Nov 18, 2024, 10:37 PM IST
ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಹಂತಕ ಬಲ್ವಂತ್ ಸಿಂಗ್ ರಾಜೋನಾ ಕ್ಷಮಾದಾನ ಅರ್ಜಿಯನ್ನು 2 ವಾರ ದೊಳಗೆ ಇತ್ಯರ್ಥಪಡಿಸುವಂತೆ ರಾಷ್ಟ್ರಪತಿಗಳ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
2012ರಲ್ಲೇ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಿದರೂ ಅದು ಇತ್ಯರ್ಥಗೊಂಡಿಲ್ಲ. ಹೀಗಾಗಿ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಬೇಕು ಎಂದು ಕೋರಿ ರಾಜೋನಾ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರದ ಪರವಾಗಿ ಯಾರೂ ಹಾಜರಾಗದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿತು.
ಬಳಿಕ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ಕ್ಷಮೆಯಾಚಿಸಿದರು. ಬಳಿಕ ಸುಪ್ರೀಂಕೋರ್ಟ್ ವಿಚಾರಣೆಯನ್ನು ನ.25ಕ್ಕೆ ಮುಂದೂಡಿತು.
ಖಲಿಸ್ತಾನಿಗಳ ವಿರುದ್ಧ ದಿಟ್ಟ ಕ್ರಮ ಕೈಗೊಂಡಿದ್ದ ಬಿಯಾಂತ್ ಸಿಂಗ್ ವಿರುದ್ಧ ಪ್ರತಿಕಾರವಾಗಿ ಬಾಂಬ್ ದಾಳಿ ಮಾಡಲಾಗಿತ್ತು. ಇದರಲ್ಲಿ ಬಿಯಾಂತ್ ಸೇರಿ 16 ಮಂದಿ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.