ಅಮಾನ್ಯಗೊಂಡ ನೋಟುಗಳ ಜಮೆಗೆ ಇನ್ನೊಂದು ಅವಕಾಶ ? ಕೇಂದ್ರಕ್ಕೆ ಸುಪ್ರೀಂ
Team Udayavani, Jul 4, 2017, 11:27 AM IST
ಹೊಸದಿಲ್ಲಿ : ಅಪನಗದೀಕರಿಸಲಾದ ನೋಟುಗಳನ್ನು ಯೋಗ್ಯ ಹಾಗೂ ಸಮರ್ಥನೀಯ ಕಾರಣಗಳಿಗಾಗಿ ಬ್ಯಾಂಕ್ನಲ್ಲಿ ಜಮೆ ಮಾಡಲು ವಿಫಲರಾದವರಿಗೆ ಇನ್ನೂ ಒಂದು ಅವಕಾಶವನ್ನು ಕೊಡುವ ಸಾಧ್ಯತೆಯ ಬಗ್ಗೆ ತಿಳಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಎರಡು ವಾರಗಳ ಕಾಲಾವಕಾಶವನ್ನು ನೀಡಿ ಇಂದು ಮಂಗಳವಾರ ಆದೇಶ ಹೊರಡಿಸಿದೆ.
ಅಪನಗದೀಕರಿಸಲಾದ ನೋಟುಗಳನ್ನು ಬ್ಯಾಂಕ್ಗಳಲ್ಲಿನ ತಮ್ಮ ಖಾತೆಗೆ ಜಮೆ ಮಾಡುವುದಕ್ಕೆ ಸರಕಾರ ಕಳೆದ ವರ್ಷ ಡಿಸೆಂಬರ್ 31ರ ವರೆಗೆ ಕಾಲಾವಕಾಶ ನೀಡಿತ್ತು. ಅನಂತರ ಮಾಚ್ 31ರ ವರೆಗಿನ ಕಾಲಾವಕಾಶದಲ್ಲಿ ಆರ್ಬಿಐ ನಲ್ಲಿ ವಿನಿಮಯಿಸುವುದಕ್ಕೆ ಅವಕಾಶ ನೀಡಲಾಗಿತ್ತು.
ಇವೆಲ್ಲ ಅವಕಾಶಗಳ ಹೊರತಾಗಿಯೂ ಸಮರ್ಥನೀಯ ಹಾಗೂ ಸರಿಯಾದ ಕಾರಣಗಳಿಗಾಗಿ ಅಮಾನ್ಯಗೊಂಡ ನೋಟುಗಳನ್ನು ಬ್ಯಾಂಕ್ಗಳಲ್ಲಿ ಜಮೆ ಮಾಡಲು ವಿಫಲರಾದವರಿಗೆ ಇನ್ನೂ ಒಂದು ಅವಕಾಶವನ್ನು ನೀಡಲು ಸಾಧ್ಯವೇ ಎಂಬುದನ್ನು ಎರಡು ವಾರಗಳ ಒಳಗೆ ತನಗೆ ತಿಳಿಸುವಂತೆ ಸುಪ್ರೀಂ ಕೋರ್ಟ್ ಇದೀಗ ಕೇಂದ್ರ ಸರಕಾರಕ್ಕೆ ಆದೇಶಿಸಿದೆ.
ಕೇಂದ್ರದ ಉತ್ತರವನ್ನು ಇದೀಗ ಕಾತರಿಂದ ಎದುರುನೋಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.