ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ; ಕೇಂದ್ರಕ್ಕೆ ಸುಪ್ರೀಂ ನೋಟಿಸ್
Team Udayavani, Jan 25, 2019, 8:40 AM IST
ನವದೆಹಲಿ: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ(ಪಿಐಎಲ್) ಅರ್ಜಿಯನ್ನು ಪರಿಶೀಲನೆ ನಡೆಸುವುದಾಗಿ ತಿಳಿಸಿರುವ ಸುಪ್ರೀಂಕೋರ್ಟ್ ಶುಕ್ರವಾರ, ನಾಲ್ಕು ವಾರಗಳೊಳಗೆ ಉತ್ತರ ನೀಡುವಂತೆ ಕೇಂದ್ರಕ್ಕೆ ನೋಟಿಸ್ ನೀಡಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟೀಸ್ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂಕೋರ್ಟ್ ಪೀಠ, ಹಿಂದುಳಿದ ಮೇಲ್ವರ್ಗದ ಬಡವರಿಗೆ ಸಂವಿಧಾನ ತಿದ್ದುಪಡಿ ಮೂಲಕ ಶೇ.10ರಷ್ಟು ಮೀಸಲಾತಿ ನೀಡಲು ಅನುವು ಮಾಡಿಕೊಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಪಿಐಎಲ್ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣದ ಬಗ್ಗೆ ನಾವು ಪರಿಶೀಲನೆ ನಡೆಸುತ್ತೇವೆ. ಆ ಹಿನ್ನೆಲೆಯಲ್ಲಿ ನಾಲ್ಕು ವಾರಗಳಲ್ಲಿ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಿರುವುದಾಗಿ ಸುಪ್ರೀಂಪೀಠ ತಿಳಿಸಿದೆ.
ಮೇಲ್ವರ್ಗದ ಬಡವರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ 124ನೇ ಸಂವಿಧಾನ ತಿದ್ದುಪಡಿ ಮಸೂದೆ ಜನವರಿ 9ರಂದು ರಾಜ್ಯಸಭೆಯಲ್ಲಿ 165 ಮತಗಳಿಂದ ಅಂಗೀಕಾರವಾಗಿದ್ದರೆ, ಲೋಕಸಭೆಯಲ್ಲಿ 323 ಮತಗಳಿಂದ ಅಂಗೀಕಾರವಾಗಿತ್ತು. ಈ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಏಳು ಮಂದಿ, ಲೋಕಸಭೆಯಲ್ಲಿ ಮೂರು ಸಂಸದರು ವಿರೋಧ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.