ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂ; ಕರ್ಣನ್ಗೆ ರಿಲೀಫ್ ಇಲ್ಲ
Team Udayavani, Jul 3, 2017, 11:53 AM IST
ಹೊಸದಿಲ್ಲಿ : ಕೋರ್ಟ್ ನಿಂದನೆಯ ಅಪರಾಧಕ್ಕಾಗಿ ಜೈಲು ಪಾಲಾಗಿರುವ ಕಲ್ಕತ್ತ ಹೈಕೋರ್ಟಿನ ಮಾಜಿ ನ್ಯಾಯಾಧೀಶ, ಜಸ್ಟಿಸ್ ಸಿ ಎಸ್ ಕರ್ಣನ್, ಜಾಮೀನು ಕೋರಿಕೆ ಹಾಗೂ ತನಗೆ ನೀಡಲಾಗಿರುವ ಜೈಲು ಶಿಕ್ಷೆಯ ಆದೇಶವನ್ನು ಹಿಂಪಡೆಯಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಯ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಇಂದು ತಿರRಸಿರಿದೆ.
ಕರ್ಣನ್ ಅವರನ್ನು ಕಳೆದ ಜೂನ್ 20ರಂದು ಕೊಯಮುತ್ತೂರಿನಲ್ಲಿ ಬಂಧಿಸಲಾಗಿತು. ನ್ಯಾಯಾಲಯ ನಿಂದನೆಗಾಗಿ ಸುಪ್ರೀಂ ಕೋರ್ಟ್ ಅವರಿಗೆ ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.
“ತುರ್ತು ವಿಚಾರಣೆಯ ನಿಮ್ಮ ಬಾಯ್ದೆರೆಯ ಕೋರಿಕೆಯನ್ನು ನಾವು ಮನ್ನಿಸಲಾರೆವು’ ಎಂದು ವರಿಷ್ಠ ನ್ಯಾಯಮೂರ್ತಿ ಜಸ್ಟಿಸ್ ಜೆ ಎಸ್ ಖೇಹರ್ ಹಾಗೂ ಜಸ್ಟಿಸ್ ಡಿ ವೈ ಚಂದ್ರಚೂಡ್ ಅವರನ್ನು ಒಳಗೊಂಡ ನ್ಯಾಯ ಪೀಠಶು ಕರ್ಣನ್ಗೆ ಖಡಕ್ ಆಗಿ ಹೇಳಿತು.
ಕರ್ಣನ್ ಅವರು ಕೋರ್ಟಿನಲ್ಲಿ ಪ್ರತಿನಿಧಿಸಿದ್ದ ವಕೀಲ ಮ್ಯಾಥ್ಯೂ ಜೆ ನೆಡುಂಪರಾ ಅವರು “ಕರ್ಣನ್ ಅವರು ಪ್ರಕೃತ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ; ಜಾಮೀನು ಕೋರಿಕೆಯ ಹಾಗೂ ತನಗಾಗಿರುವ ಜೈಲು ಶಿಕ್ಷೆಯ ಆದೇಶವನ್ನು ಹಿಂಪಡೆಯಬೇಕೆಂಬ ಅವರ ಅರ್ಜಿಯ ತ್ವರಿತ ವಿಚಾರಣೆಯ ಅಗತ್ಯವಿದೆ’ ಎಂದು ವಾದಿಸಿದಾಗ, ನ್ಯಾಯ ಪೀಠ “ತ್ವರಿತ ವಿಚಾರಣೆ ಅಸಾಧ್ಯ’ ಎಂದು ಖಡಾಖಂಡಿತವಾಗಿ ಹೇಳಿ ಕರ್ಣನ್ಗೆ ತತ್ಕ್ಷಣದ ರಿಲೀಫ್ ನಿರಾಕರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.