ಗುರುಗ್ರಾಮ ಶಾಲಾ ಬಾಲಕನ ಕೊಲೆ: ಬಾಲಾಪರಾಧಿಗೆ ಜಾಮೀನು ಇಲ್ಲ
Team Udayavani, Jul 20, 2018, 4:18 PM IST
ಗುರುಗ್ರಾಮ : 2017ರಲ್ಲಿ ಗುರುಗ್ರಾಮದ ಖಾಸಗಿ ಶಾಲೆಯೊಂದರಲ್ಲಿ ನಡೆದಿದ್ದ ಏಳು ವರ್ಷ ಪ್ರಾಯದ ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕನ ತಂದೆ, ಪುತ್ರನ ಪರವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ತಿರಸ್ಕರಿಸಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್ ಶೀಟ್ ಸಲ್ಲಿಕೆಗಿರುವ 60 ದಿನಗಳ ಗಡುವು ಮುಗಿದಿದ್ದು ಇನ್ನೂ ಚಾರ್ಜ್ ಶೀಟ್ ಸಲ್ಲಿಕೆಯಾಗದಿರುವ ಕಾರಣ ತನ್ನ ಪುತ್ರನಾಗಿರುವ ಆರೋಪಿ ಬಾಲಕನಿಗೆ ಜಾಮೀನು ನೀಡಬೇಕು ಎಂದು ಆರೋಪಿಯ ತಂದೆ ವಾದಿಸಿದ್ದರು.
ಇದಕ್ಕೆ ಸುಪ್ರೀಂ ಕೋರ್ಟ್, “ಇದೊಂದು ಕೊಲೆ ಪ್ರಕರಣ; ಆರೋಪ ಸಾಬೀತಾದರೆ ಜೀವಾವಧಿ ಜೈಲು ಶಿಕ್ಷೆಯಾಗುತ್ತದೆ; ಹಾಗಾಗಿ ಚಾರ್ಜ್ ಶೀಟ್ ಸಲ್ಲಿಕೆಗೆ 90 ದಿನಗಳ ಕಾಲಾವಕಾಶ ಇದೆ’ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿತು.
2017ರ ಸೆ.8ರಂದು ಖಾಸಗಿ ಶಾಲೆಯ ಎರಡನೇ ತರಗತಿಯ ಏಳು ವರ್ಷದ ಬಾಲಕನ ಕತ್ತು ಸೀಳಲ್ಪಟ್ಟ ಮೃತ ದೇಹ ಶಾಲೆಯ ಶೌಚಾಲಯದ ಒಳಗೆ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.