
ಆಧಾರ್: 38 ದಿನಗಳ ವಿಚಾರಣೆ ಬಳಿಕ ತೀರ್ಪು ಕಾದಿರಿಸಿದ ಸುಪ್ರೀಂ
Team Udayavani, May 10, 2018, 7:44 PM IST

ಹೊಸದಿಲ್ಲಿ : ಕೇಂದ್ರ ಸರಕಾರದ ಅತ್ಯಂತ ಮಹತ್ವದ ಮತ್ತು ದೇಶದ ಏಕೈಕ ಬಯೋಮೆಟ್ರಿಕ್ ಗುರುತು ಪತ್ರ ಯೋಜನೆಯಾಗಿರುವ ಆಧಾರ್ ಕಾರ್ಡ್ ನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕಂತೆಯನ್ನು ನಾಲ್ಕು ತಿಂಗಳ ಅವಧಿಯಲ್ಲಿ ಹರಡಿಕೊಂಡ 38 ದಿನಗಳ ಕಾಲ ವಿಚಾರಣೆ ನಡೆಸಿದ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ಇಂದು ಗುರುವಾರ ತನ್ನ ತೀರ್ಪನ್ನು ಕಾದಿರಿಸಿತು.
ಆಧಾರ್ ಕಾರ್ಯಕ್ರಮಕ್ಕೆ 2016ರಲ್ಲಿ ನೀಡಲಾಗಿದ್ದ ಕಾಯಿದೆ ಸ್ವರೂಪ ಹಾಗೂ ಅದರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ದೇಶಾದ್ಯಂತದಿಂದ ಹಲವಾರು ಅರ್ಜಿಗಳು ಸವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಲ್ಪಟ್ಟಿದ್ದವು.
ದೇಶದ ಉನ್ನತ ವಕೀಲರಾಗಿರುವ ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ (ಕೇಂದ್ರ ಸರಕಾರದ ವಕೀಲರು), ಹಿರಿಯ ವಕೀಲರಾದ ಕಪಿಲ್ ಸಿಬಲ್, ಪಿ ಚಿದಂಬರಂ, ರಾಕೇಶ್ ದ್ವಿವೇದಿ, ಶ್ಯಾಮ್ ದಿವಾನ್,ಅರವಿಂದ್ ದಾತಾರ್ ಮುಂತಾದವರು ವಿವಿಧ ಕಕ್ಷಿದಾರರನ್ನು ಪ್ರತಿನಿಧಿಸಿ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಿದ್ದರು.
‘ಇಡಿಯ ಜಗತ್ತೇ ವಿದ್ಯುನ್ಮಾನ ಜಾಲಕ್ಕೆ ಒಳಪಟ್ಟಿರುವಾಗ ಮತ್ತು ಈಗಾಗಲೇ ಖಾಸಗಿ ವ್ಯಕ್ತಿಗಳು ಮತ್ತು ಸಂಸ್ಥೆಗಳ ಮಾಹಿತಿಗಳು ಜಾಲದಲ್ಲಿ ಉಪಲಬ್ಧವಿರುವಾಗ ಆಧಾರ್ ಮಾಹಿತಿಯು ಅದಕ್ಕಿಂತ ಹೇಗೆ ಭಿನ್ನವಾಗಿರಬಲ್ಲುದು’ ಎಂದು ಸುಪ್ರೀಂ ಕೋರ್ಟ್ ಪೀಠ ಪ್ರಕರಣದ ವಿಚಾರಣೆಯ ವೇಳೆ ಆಧಾರ್ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿದಾರರನ್ನು ಕೇಳಿತ್ತು.
ಬ್ಯಾಂಕ್ ಖಾತೆ ಸಹಿತ ಸರಕಾರದ ವಿವಿಧ ಜನ ಕಲ್ಯಾಣ ಯೋಜನೆಗಳ ಲಾಭವನ್ನು ಸಾರ್ವಜನಿಕರು ಪಡೆಯುವುದಕ್ಕೆ ಆ ಯೋಜನೆಗಳಿಗೆ ಜನರ ಆಧಾರ್ ನಂಬರ್ ಜೋಡಿಸುವ ಮಾರ್ಚ್ 31, 2018ರ ಗಡುವನ್ನು ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ ತನ್ನ ಅಂತಿಮ ತೀರ್ಪು ಪ್ರಕಟವಾಗುವ ದಿನಾಂಕದ ವರೆಗಿನ ಅನಿರ್ದಿಷ್ಟಾವಧಿಗೆ ವಿಸ್ತರಿಸಿತ್ತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.