ಆಫ್ ಲೈನ್ ಪರೀಕ್ಷೆ: ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ
ಕೋವಿಡ್19 ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ
Team Udayavani, Sep 3, 2021, 8:33 PM IST
ನವದೆಹಲಿ: ಕೇರಳದಲ್ಲಿ ಕೋವಿಡ್-19 ಸೋಂಕು ಪ್ರಕರಣ ಹೆಚ್ಚುತ್ತಿರುವುದರಿಂದ ಸೆ.06ರಿಂದ ಆರಂಭವಾಗಲಿರುವ 11ನೇ ತರಗತಿಯ ಆಫ್ ಲೈನ್ ಪರೀಕ್ಷೆಯನ್ನು ನಡೆಸುವ ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಒಂದು ವಾರದವರೆಗೆ ತಡೆ ನೀಡಿದೆ.
ಕೋವಿಡ್-19 ಕಾರಣದಿಂದ ರಾಜ್ಯದಲ್ಲಿ ಆತಂಕಕಾರಿ ಪರಿಸ್ಥಿತಿ ಇದೆ. ದೇಶದ ಶೇ.70ರಷ್ಟು ಪ್ರಕರಣಗಳು ಕೇರಳದಲ್ಲಿ ವರದಿಯಾಗುತ್ತಿದ್ದು, ಈ ವಯಸ್ಸಿನ ಮಕ್ಕಳನ್ನು ಈ ಅಪಾಯಕ್ಕೆ ಸಿಲುಕಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ವರ್ಷ ಸೆಪ್ಟೆಂಬರ್ ನಲ್ಲಿ ಪರೀಕ್ಷೆಯನ್ನು ನಡೆಸುವ ಮೊದಲು ರಾಜ್ಯ ಸರ್ಕಾರ ಪ್ರಚಲಿತ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅರ್ಜಿದಾರರು ಸಲ್ಲಿಸಿರುವ ಅರ್ಜಿಯಲ್ಲಿ ಮೇಲ್ನೊಟಕ್ಕೆ ಕಂಡು ಬರುತ್ತದೆ. ಈ ಸಂಬಂಧ ಸರ್ಕಾರದ ಪರ ವಕೀಲರಿಂದ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಿಚಾರಣೆಯವರೆಗೂ ಆಫ್ ಲೈನ್ ಪರೀಕ್ಷೆ ನಡೆಸದಂತೆ ಮಧ್ಯಂತರ ಆದೇಶ ನೀಡುವುದಾಗಿ ನ್ಯಾಯಮೂರ್ತಿ ಗಳಾದ ಎ.ಎಂ.ಖಾನ್ವಿಲ್ ಕರ್,ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.
ಇದನ್ನೂ ಓದಿ:ಪ್ರಧಾನಿ ಮೋದಿ ಮನೆಯಂಗಳದಲ್ಲಿ ಕೇರಳದ ಪುಟಾಣಿ ಉಡುಗೊರೆಯಾಗಿ ನೀಡಿದ ಪೇರಳೆ ಗಿಡ
ಸುಪ್ರೀಂ ಕೋರ್ಟ್ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 13 ಕ್ಕೆ ಮುಂದೂಡಿದೆ.
ಆಫ್ ಲೈನ್ ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ವಕೀಲ ರಸೂಲ್ಯನ್ ಅವರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಇದೀಗ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.