ಮಹಾರಾಷ್ಟ್ರ ಬಿಕ್ಕಟ್ಟು: ಅರ್ಜಿಗಳು ವಿಸ್ತೃತ ಪೀಠಕ್ಕೆ?
Team Udayavani, Jul 21, 2022, 7:20 AM IST
ನವದೆಹಲಿ: ಮಹಾರಾಷ್ಟ್ರದ ಇತ್ತೀಚೆಗಿನ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿ ಶಿವಸೇನೆ ಮತ್ತು ಅದರ ಬಂಡಾಯ ಶಾಸಕರು ಸಲ್ಲಿಸಿರುವ ಅರ್ಜಿಗಳು ಹಲವು ಸಾಂವಿಧಾನಿಕ ಪ್ರಶ್ನೆಗಳನ್ನು ಮೂಡಿಸಿರುವ ಕಾರಣ, ಅವುಗಳನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಜತೆಗೆ, ವಿಪ್ ಉಲ್ಲಂಘಿಸಿರುವ ಉದ್ಧವ್ ಬಣದ ಶಾಸಕರ ಅನರ್ಹತೆ ಕೋರಿ ಸಿಎಂ ಏಕನಾಥ ಶಿಂಧೆ ಸಲ್ಲಿಸಿರುವ ಮನವಿಗೆ ಸಂಬಂಧಿಸಿ ಸ್ಪೀಕರ್ ಸದ್ಯಕ್ಕೆ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂಬ ತನ್ನ ಜು.11ರ ಆದೇಶವನ್ನೂ ನ್ಯಾಯಪೀಠ ವಿಸ್ತರಣೆ ಮಾಡಿದೆ.
ಬುಧವಾರ ಅರ್ಜಿಗಳ ವಿಚಾರಣೆ ಆರಂಭಿಸಿದ ಸಿಜೆಐ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ, “ಎರಡೂ ಬಣಗಳು ಸಲ್ಲಿಸಿರುವ ಅರ್ಜಿಗಳಲ್ಲಿ ಪಕ್ಷದಲ್ಲಿನ ಬಿರುಕು, ರಾಜಕೀಯ ಪಕ್ಷದ ವಿಲೀನ, ಪಕ್ಷಾಂತರ, ಅನರ್ಹತೆ ಸೇರಿದಂತೆ ಹಲವು ಸಾಂವಿಧಾನಿಕ ವಿಚಾರಗಳು ಇರುವ ಕಾರಣ, ಇವುಗಳನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವುದು ಉತ್ತಮ’ ಎಂದು ಹೇಳಿದೆ.
ಜತೆಗೆ, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಎರಡೂ ಕಡೆಯವರಿಗೆ ನೋಟಿಸ್ ಜಾರಿ ಮಾಡಿ, ಮುಂದಿನ ವಿಚಾರಣೆಯನ್ನು ಆ.1ಕ್ಕೆ ಮುಂದೂಡಿದೆ.
ಬಿರುಸಿನ ವಾದ-ಪ್ರತಿವಾದ:
ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಉದ್ಧವ್ ಬಣದ ಪರ ವಾದಿಸಿದರೆ, ಹಿರಿಯ ನ್ಯಾಯವಾದಿ ಹರೀಶ್ ಸಾಳ್ವೆ ಅವರು ಶಿಂಧೆ ಬಣದ ಪರ ವಕಾಲತ್ತು ವಹಿಸಿದ್ದರು. ಎರಡೂ ಕಡೆ ಬಿರುಸಿನ ವಾದ-ಪ್ರತಿವಾದಗಳು ನಡೆದವು. “ಹೀಗೆಯೇ ಮುಂದುವರಿದರೆ ಜನಾದೇಶಕ್ಕೆ ಅರ್ಥವೇನಿದೆ? ಪಕ್ಷಾಂತರವನ್ನು ತಡೆಯಲೆಂದೇ ಇರುವ 10ನೇ ಪರಿಚ್ಛೇದವನ್ನು ತಿರುವು-ಮುರುವು ಮಾಡಿ, ಪಕ್ಷಾಂತರಕ್ಕೆ ಕುಮ್ಮಕ್ಕು ನೀಡಲು ಬಳಸಲಾಗುತ್ತಿದೆ’ ಎಂದು ಸಿಬಲ್ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹರೀಶ್ ಸಾಳ್ವೆ, “ಮುಖ್ಯಮಂತ್ರಿ ಬದಲಾದ ತಕ್ಷಣ ಸ್ವರ್ಗವೇನೂ ಧರೆಗುರುಳುವುದಿಲ್ಲ. ಕೇವಲ 20 ಶಾಸಕರ ಬೆಂಬಲವೂ ಇಲ್ಲದ ವ್ಯಕ್ತಿಯನ್ನು ಕೋರ್ಟ್ ಮತ್ತೆ ಗದ್ದುಗೆಗೇರಿಸಬೇಕು ಎಂದು ನೀವು ಬಯಸುತ್ತಿದ್ದೀರಾ’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
ಆಸೀಸ್ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿಲ್ಲ: ಐಟಿ ಕಾರ್ಯದರ್ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.