ಸುಪ್ರೀಂ ಕೋಟ್ನಿಂದ ಅತೀ ದೊಡ್ಡ ಸಾರ್ವಜನಿಕ ಪ್ರಾಮುಖ್ಯವಿಷಯದ ವಿಶೇಷ ವಿಚಾರಣೆ
Team Udayavani, Apr 20, 2019, 11:27 AM IST
ಹೊಸದಿಲ್ಲಿ : ನ್ಯಾಯಾಂಗದ ಸ್ವಾತಂತ್ರ್ಯವನ್ನು ಸ್ಪರ್ಶಿಸುವ ಅತೀ ದೊಡ್ಡ ಸಾರ್ವಜನಿಕ ಪ್ರಾಮುಖ್ಯ ವಿಷಯದ ವಿಶೇಷ ವಿಚಾರಣೆ ನಡೆಸಲು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ವಿಶೇಷ ಪೀಠವನ್ನು ರಚಿಸಲಾಗಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಿಜೆಐ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕಾಣಿಸಿಕೊಂಡಿವೆ ಎಂದು ಸುಪ್ರೀಂ ಕೋರ್ಟಿನ ಸಂಬಂಧಿತ ಅಧಿಕಾರಿಗಳ ಮುಂದೆ ಹೇಳಿರುವುದನ್ನು ಅನುಸರಿಸಿ ಈ ವಿಶೇಷ ಪೀಠವನ್ನು ರಚಿಸಲಾಗಿದೆ. ಇಂದು ಶನಿವಾರ ಬೆಳಗ್ಗೆ 10.30ರ ಹೊತ್ತಿಗೆ ವಿಶೇಷ ವಿಚಾರಣೆ ಆರಂಭವಾಗಲಿದೆ ಎಂದು ಮೂಲಗಳು ಹೇಳಿವೆ.
ಮಹಿಳೆಯೊಬ್ಬರು ಮಾಡಿರುವ ಲೈಂಗಿಕ ಕಿರುಕುಳದ ಎಲ್ಲ ಆರೋಪಗಳು ನಿರಾಧಾರ ಮತ್ತು ದುರುದ್ದೇಶಪೂರಿತವಾದವುಗಳೆಂದು ಸುಪ್ರೀಂ ಕೋರ್ಟಿನ ಮಹಾ ಕಾರ್ಯದರ್ಶಿ ಸುಧಾಕರ ಕಲಗಾಂವ್ಕರ್ ಹೇಳಿದ್ದಾರೆ. ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ಜಸ್ಟಿಸ್ಗಳಾದ ಅರುಣ್ ಮಿಶ್ರಾ ಮತ್ತು ಸಂಜೀವ್ ಖನ್ನಾ ಅವರನ್ನು ಒಳಗೊಂಡ ವಿಶೇಷ ಪೀಠವು ಆರೋಪಗಳ ವಿಚಾರಣೆಯನ್ನು ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.