ಸೇನೆಯಲ್ಲಿ ಮಹಿಳೆಯರಿಗೆ ಕಮಾಂಡರ್ ಹುದ್ದೆ: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂಕೋರ್ಟ್
ಈ ಬಗ್ಗೆ ಕೇಂದ್ರ ಸರ್ಕಾರ ತನ್ನ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು.
Team Udayavani, Feb 17, 2020, 11:25 AM IST
ನವದೆಹಲಿ: ಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಗೆ ಕಮಾಂಡರ್ ಹುದ್ದೆ ನೀಡಬೇಕೆಂದು ದೆಹಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿಹಿಡಿದಿದ್ದು, ಮಹಿಳಾ ಅಧಿಕಾರಿಗಳನ್ನು ಕಮಾಂಡರ್ ಹುದ್ದೆಗೆ ನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂಕೋರ್ಟ್ ಟೀಕಿಸಿದೆ.
ಮಹಿಳಾ ಅಧಿಕಾರಿಗಳಿಗೆ ಪರ್ಮನೆಂಟ್ ಕಮಿಷನ್ ಹುದ್ದೆ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ತನ್ನ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ಮಹಿಳಾ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಪುರುಷರ ನೇಮಕಾತಿಯ ನಿಬಂಧನೆಗಳ ಪ್ರಕಾರವೇ ಮಾಡಬೇಕು ಎಂದು ಸೂಚನೆ ನೀಡಿದೆ.
ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಮಹಿಳಾ ಅಧಿಕಾರಿಗಳಿಗೆ ಪರ್ಮನೆಂಟ್ ಕಮಿಷನ್ ಅನ್ವಯವಾಗಲಿದೆ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಸೇನೆಯಲ್ಲಿ ಮಹಿಳೆಯರಿಗೆ ಕಮಾಂಡರ್ ಹುದ್ದೆ ನೀಡಬೇಕೆಂಬ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ದೈಹಿಕ ರಚನೆ ಆಧಾರದ ಮೇಲೆ ಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಗೆ ಕಮಾಂಡರ್ ಹುದ್ದೆ ವಿರೋಧಿಸುವ ಕೇಂದ್ರದ ನಿಲುವನ್ನು ತಿರಸ್ಕರಿಸಿದೆ. ಲಿಂಗಾಧಾರಿತವಾಗಿ ಆಲೋಚಿಸುವ ಕೇಂದ್ರ ಸರ್ಕಾರ ತನ್ನ ಧೋರಣೆ ಬದಲಾಯಿಸಿಕೊಳ್ಳಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.