ಇನ್ನು ಬಿಸಿಯೂಟದಲ್ಲಿ ಜೇನಿನ “ಸಿಹಿ’: ರಾಜ್ಯಗಳಿಗೆ ಕೇಂದ್ರ ಸಲಹೆ
Team Udayavani, Mar 20, 2023, 7:15 AM IST
ನವದೆಹಲಿ:ಇನ್ನು ಮುಂದೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ “ಸಿಹಿ’ಯೂ ಇರಲಿದೆ!
ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪವನ್ನೂ ಸೇರಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸಲಹೆ ನೀಡಿದೆ. ಜೇನುತುಪ್ಪದಲ್ಲಿರುವ ಪೋಷಕಾಂಶಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಜೇನು ಸಾಕಣೆ ಮಾಡುವವರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಸಲಹೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಎಲ್ಲ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದ್ದು, “ದೇಶದಲ್ಲಿ ಜೇನುತುಪ್ಪದ ಸೇವನೆಯನ್ನು ಹೆಚ್ಚಳ ಮಾಡುವ ಸಲುವಾಗಿ ಮತ್ತು ಜೇನುಸಾಕಣೆ ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನನ್ನೂ ಸೇರಿಸಿ ಮಕ್ಕಳಿಗೆ ನೀಡಿ. ಜೇನುತುಪ್ಪದಲ್ಲಿ ಸಾಕಷ್ಟು ಪೋಷಕಾಂಶಗಳಿದ್ದು, ಮಕ್ಕಳ ಬೆಳವಣಿಗೆಗೂ ಇದು ಪೂರಕವಾಗಿರಲಿದೆ.
ಹೀಗಾಗಿ, ಪ್ರಧಾನಮಂತ್ರಿ ಪೋಷಣ್ ಯೋಜನೆಯಡಿ ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದಲ್ಲಿ ಪ್ರತ್ಯೇಕವಾಗಿ ಜೇನುತುಪ್ಪ ನೀಡಲು ಅಥವಾ ಬೇರೆ ಬೇರೆ ಖಾದ್ಯಗಳಲ್ಲಿ ಅದನ್ನು ಸೇರಿಸಲು ಪ್ರಯತ್ನಿಸಿ’ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.