ಯುಪಿಯಲ್ಲಿ ಭೀಕರ ದುರಂತ:ರೈಲು ಢಿಕ್ಕಿಯಾಗಿ 13 ಮಕ್ಕಳ ದುರ್ಮರಣ
Team Udayavani, Apr 26, 2018, 9:01 AM IST
ಖುಷಿನಗರ: ಮಾನವ ರಹಿತ ರೈಲ್ವೇ ಕ್ರಾಸಿಂಗ್‌ನಲ್ಲಿ ರೈಲೊಂದು ಢಿಕ್ಕಿಯಾಗಿ 13 ಶಾಲಾ ಮಕ್ಕಳು ದಾರುಣವಾಗಿ ಸಾವನ್ನಪ್ಪಿ 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಉತ್ತರಪ್ರದೇಶದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ನಡೆದಿದೆ.
ವರದಿಯಾದಂತೆ ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ವೇಳೆ ವೇಗವಾಗಿ ಬಂದ ರೈಲು ಢಿಕ್ಕಿಯಾಗಿದ್ದು ಸ್ಥಳದಲ್ಲೇ ಹಲವು ಮಕ್ಕಳು ಸಾವನ್ನಪ್ಪಿದ್ದಾರೆ. ಢಿಕ್ಕಿಯ ರಭಸಕ್ಕೆ ವಾಹನ ನಜ್ಜುಗುಜ್ಜಾಗಿದೆ. ಕೆಲ ಮಕ್ಕಳು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.
ಅಪಘಾತವಾದೊಡನೆ ಸ್ಥಳೀಯರು ನೂರಾರು ಮಂದಿ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದರು.
ವಾಹನದಲ್ಲಿ 25 ಮಂದಿ ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿದ್ದು, ಹೆಚ್ಚಿನವರು 10 ವರ್ಷದ ಒಳಗಿನವರು ಎಂದು ಹೇಳಲಾಗಿದೆ.
ಗಾಯಗೊಂಡಿರುವ ಹಲವು ಮಕ್ಕಳ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.