Modi ಮಾನನಷ್ಟ ಕೇಸ್: ತರೂರ್ ವಿಚಾರಣೆಗೆ ತಡೆಯಾಜ್ಞೆ 4 ವಾರ ವಿಸ್ತರಿಸಿದ ಸುಪ್ರೀಂ
Team Udayavani, Oct 14, 2024, 5:55 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ದಿಲ್ಲಿ ಹೈಕೋರ್ಟ್ ತಮ್ಮ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸ ಬೇಕೆಂದು ಕೋರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿ ವಿಚಾರಣಾ ನ್ಯಾಯಾಲಯದ ಕಲಾಪಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನ ನಾಲ್ಕು ವಾರಗಳವರೆಗೆ ವಿಸ್ತರಿಸಿದೆ
ಪ್ರಧಾನಿ ಮೋದಿ ಅವರನ್ನು ಶಿವಲಿಂಗದ ಮೇಲಿನ ಚೇಳಿಗೆ ಹೋಲಿಸಿ ತರೂರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕೇಸು ದಾಖಲಾಗಿತ್ತು. ಪ್ರಕರಣ ರದ್ದು ಕೋರಿ ತರೂರ್ ದಾವೆ ಹೂಡಿದ್ದರು.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ. ಎನ್ ಭಟ್ಟಿ ಅವರನ್ನೊಳಗೊಂಡ ಪೀಠ, ತರೂರ್ ಅವರ ಮನವಿಗೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ ಪೊಲೀಸರು ಮತ್ತು ದೂರುದಾರರಿಗೆ ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಿದೆ. ಮಾನನಷ್ಟ ಮೊಕದ್ದಮೆಗಳ ಮೇಲಿನ ತಡೆ ಮಧ್ಯಂತರ ಆದೇಶ ಮುಂದುವರೆಯಲು” ಪೀಠವು ನಿರ್ದೇಶಿಸಿದೆ.
ಸೆಪ್ಟೆಂಬರ್ 10 ರಂದು ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
ಕಾಂಗ್ರೆಸ್ ನಾಯಕರ ಹೇಳಿಕೆಯಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬಿಜೆಪಿ ನಾಯಕ ರಾಜೀವ್ ಬಬ್ಬರ್ ಅವರು ತರೂರ್ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.