![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 11, 2021, 10:31 AM IST
ಮುಂಬೈ: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 17ಕ್ಕೆ ಏರಿಕೆಯಾದ ಕಾರಣ ಮುಂಬೈನಲ್ಲಿ ಶನಿವಾರ ಮತ್ತು ರವಿವಾರ ಸೆಕ್ಷನ್ 144 ವಿಧಿಸಲಾಗಿದೆ. ಸದ್ಯ ದೇಶದಲ್ಲೇ ಅತೀ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ.
ಮತ್ತಷ್ಟು ಸೋಂಕು ಹರಡುವಿಕೆಯನ್ನು ತಡೆಯಲು, ಮುಂಬೈನಲ್ಲಿ ರಾಲಿಗಳು, ಮೋರ್ಚಾಗಳು, ಜನರು ಅಥವಾ ವಾಹನಗಳ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ.
ಶುಕ್ರವಾರ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರದ ಏಳು ಹೊಸ ಪ್ರಕರಣಗಳು ವರದಿಯಾಗಿವೆ. ಮೂರು ವರ್ಷದ ಮಗುವಿಗೂ ಒಮಿಕ್ರಾನ್ ತಳಿಯ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ.
ಮುಂಬೈನಲ್ಲಿ ಮೂರು ಪ್ರಕರಣಗಳು ಮತ್ತು ಪಿಂಪ್ರಿ ಚಿಂಚ್‌ವಾಡ್ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ಪ್ರಕರಣಗಳು ಕಂಡುಬಂದಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಚಿಕ್ಕಮಗಳೂರು ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೋವಿಡ್ ಆತಂಕ
ಎಲ್ಲಾ ಮೂರು ಮುಂಬೈ ರೋಗಿಗಳು 48, 25 ಮತ್ತು 37 ವರ್ಷ ವಯಸ್ಸಿನ ಪುರುಷರು, ತಾಂಜಾನಿಯಾ, ಯುಕೆ ಮತ್ತು ದಕ್ಷಿಣ ಆಫ್ರಿಕಾಕ್ಕೆ ಅಂತರಾಷ್ಟ್ರೀಯ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆ.
ಭಾರತದ ಓಮಿಕ್ರಾನ್ ಸೋಂಕಿತರ ಸಂಖ್ಯೆ 32 ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 17 ಪ್ರಕರಣಗಳು, ರಾಜಸ್ಥಾನದಲ್ಲಿ ಒಂಬತ್ತು ಪ್ರಕರಣಗಳು, ಗುಜರಾತ್, ಕರ್ನಾಟಕ ಮತ್ತು ದೆಹಲಿಯಲ್ಲಿ ಕ್ರಮವಾಗಿ ಮೂರು, ಎರಡು ಮತ್ತು ಒಂದು ಪ್ರಕರಣಗಳು ವರದಿಯಾಗಿವೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.