2ನೇ ಮದುವೆ ತಪ್ಪಲ್ಲ: ಸುಪ್ರೀಂ ಕೋರ್ಟ್
Team Udayavani, Aug 27, 2018, 10:09 AM IST
ಹೊಸದಿಲ್ಲಿ: ಮೊದಲ ವಿವಾಹ ವಿಚ್ಛೇದನಕ್ಕೆ ಸಂಬಂಧಿಸಿದ ಪ್ರಕರಣ ಇತ್ಯರ್ಥಗೊಳ್ಳುವ ಪ್ರಕ್ರಿಯೆಯಲ್ಲಿ ಇರುವಾಗಲೇ ಎರಡನೇ ವಿವಾಹವಾದರೆ ಅದು ಸಿಂಧುವಾಗುತ್ತದೆ. ಹೀಗೆಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ವಿವಾಹ ಕಾಯ್ದೆಯಲ್ಲಿ ಉಲ್ಲೇಖಗೊಂಡಿ ರುವಂತೆ ವಿಚಾರಣೆಯ ಹಂತದಲ್ಲಿರುವ ಮದುವೆಯನ್ನು ಮುಂದುವರಿಸಲು ಸಾಧ್ಯವಿಲ್ಲದೇ ಇರುವಾಗ ಆ ಹಂತದಲ್ಲಿ ನಡೆದ ವಿವಾಹಕ್ಕೆ ಮಾನ್ಯತೆ ನೀಡಬಹುದು ಎಂದಿದೆ.
ಎರಡೂ ಪಕ್ಷಗಳೂ ವೈವಾಹಿಕ ವಿವಾದದ ಬಗ್ಗೆ ಇರುವ ಪ್ರಕರಣ ಸಮಾಪ್ತಿಗೊಳಿಸಲು ನಿರ್ಧರಿಸಿರುವಾಗ ಮರು ಮದುವೆ ಮೇಲೆ ನಿಷೇಧ ಹೇರುವ ವಿಚಾರವೇ ಬರುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಹಿಂದೂ ವಿವಾಹ ಕಾಯ್ದೆ ಎನ್ನುವುದು ಸಮಾಜದಲ್ಲಿ ಸುಧಾರಣೆ ತರುವ ಉದಾತ್ತ ಧ್ಯೇಯ ಹೊಂದಿದೆ. ಸಾಮಾಜಿಕವಾಗಿ ಧನಾತ್ಮಕ ಉದ್ದೇಶ ಹೊಂದಿರುವ ಕಾಯ್ದೆಯನ್ನು ವಿಮರ್ಶಿಸಲು ಕೋರ್ಟ್ ಬಯಸುವುದಿಲ್ಲ ಎಂದಿದೆ. ವ್ಯಕ್ತಿಯೊಬ್ಬರ 2ನೇ ವಿವಾಹ ಪ್ರಕರಣ ಸಂಬಂಧ ಸುಪ್ರೀಂ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.