ಗುಜರಾತ್‌ನಲ್ಲಿ ನಾಳೆ ಎರಡನೇ ಹಂತದ ಮತದಾನ; ತಾಯಿಯನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ರಧಾನಿ, ಕೇಂದ್ರ ಸಚಿವ ಶಾ, ಗುಜರಾತ್ ಸಿಎಂ ಪಟೇಲ್ ಪ್ರಮುಖ ಮತದಾರರು
Team Udayavani, Dec 4, 2022, 9:36 PM IST
ಗಾಂಧಿನಗರ: ಗುಜರಾತ್‌ನಲ್ಲಿ ನಾಳೆ ಡಿಸೆಂಬರ್ 5 ರಂದು ರಾಜ್ಯದ 14 ಕೇಂದ್ರ ಮತ್ತು ಉತ್ತರ ಜಿಲ್ಲೆಗಳ 93 ವಿಧಾನಸಭಾ ಸ್ಥಾನಗಳಿಗೆ ಎರಡನೇ ಹಂತದ ಮತದಾನ ಮುಕ್ತಾಯಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಡಿ4) ತಮ್ಮ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ವಿಧಾನಸಭಾ ಚುನಾವಣೆಯ ಭರ್ಜರಿ ಪ್ರಚಾರದ ನಂತರ ಅವರು ಗಾಂಧಿನಗರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದರು.
ಚುನಾವಣೆಯ ಮೊದಲ ಹಂತದ ಮತದಾನ ಡಿಸೆಂಬರ್ 1 ರಂದು ನಡೆದಿತ್ತು. ಎರಡನೇ ಹಂತದ ಮತದಾನಕ್ಕೂ ಮುನ್ನ ತಮ್ಮ ತಾಯಿಯ ಆಶೀರ್ವಾದ ಪಡೆಯುತ್ತಿರುವ ಪ್ರಧಾನಿ ಮೋದಿ ಅವರ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.
ವರದಿಗಳ ಪ್ರಕಾರ, ಪ್ರಧಾನಿ ಮೋದಿ ಗುಜರಾತ್‌ನಲ್ಲಿ ಬೆಳಗ್ಗೆ 8.30 ಕ್ಕೆ ಮತ ಚಲಾಯಿಸಲಿದ್ದಾರೆ. ನಾಳೆ ನಡೆಯಲಿರುವ ಚುನಾವಣೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಮತ್ತು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಪ್ರಮುಖ ಮತದಾರರಾಗಿದ್ದಾರೆ.
ಪ್ರಧಾನಿ ಮೋದಿ ಅವರು ತಮ್ಮ ಕೊನೆಯ ಚುನಾವಣಾ ರ‍್ಯಾಲಿಯನ್ನು ತಮ್ಮ ಸ್ಥಳೀಯ ರಾಜ್ಯದಲ್ಲಿ ಶುಕ್ರವಾರ ಅಹಮದಾಬಾದ್‌ನಲ್ಲಿ ನಡೆಸಿದ್ದರು, ನಂತರ ಸತತ ದಿನಗಳಲ್ಲಿ ಡಿಸೆಂಬರ್ 1 ಮತ್ತು 2 ರಂದು ರೋಡ್‌ಶೋಗಳನ್ನು ನಡೆಸಿದರು. ಗುಜರಾತ್‌ನ ಜನರು ಅಭಿವೃದ್ಧಿಯ ಪಥದಲ್ಲಿ ಮುಂದುವರಿಯಲು ಬಯಸುತ್ತಾರೆ ಎಂದು ಪ್ರಧಾನಿ ಹೇಳಿದ್ದಾರೆ.
Gujarat | Prime Minister Narendra Modi meets his mother Heeraben Modi at her residence, in Gandhinagar. pic.twitter.com/3Rtg3gJ3ON
— ANI (@ANI) December 4, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.