Missing: ಸಂವಿಧಾನದ ಪೀಠಿಕೆಯಲ್ಲಿ ‘ಜಾತ್ಯತೀತ, ಸಮಾಜವಾದಿ’ ಪದ ಕಣ್ಮರೆ: ಕಾಂಗ್ರೆಸ್ ಆರೋಪ
Team Udayavani, Sep 20, 2023, 1:23 PM IST
ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನೆಯ ದಿನದಂದು ಶಾಸಕರಿಗೆ ನೀಡಲಾದ ಸಂವಿಧಾನದ ಹೊಸ ಪ್ರತಿಗಳ ಮುನ್ನುಡಿಯಲ್ಲಿ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳು ಕಣ್ಮರೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಚೌಧರಿ ನೂತನ ಸಂಸತ್ ಭವನದಲ್ಲಿ ನೀಡಿದ್ದ ಸಂವಿಧಾನದ ಮುನ್ನುಡಿಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಪದಗಳಿಲ್ಲ, ಈ ಎರಡು ಪದಗಳು ಸಂವಿಧಾನದಲ್ಲಿ ಇಲ್ಲದಿದ್ದಲ್ಲಿ ಅದು ಆತಂಕಕಾರಿ ಸಂಗತಿಯಾಗಿದೆ. ಸರ್ಕಾರವು ಈ ಬದಲಾವಣೆಯನ್ನು ಅತ್ಯಂತ “ಬುದ್ಧಿವಂತಿಕೆಯಿಂದ” ಮಾಡಿದೆ ಮತ್ತು ಅವರ ಉದ್ದೇಶಗಳು “ಸಮಸ್ಯೆ”ಉಂಟುಮಾಡುವಂತದ್ದಾಗಿದೆ ಎಂದ ಅವರು ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲು ಬಯಸಿದ್ದೆ ಆದರೆ ಅದಕ್ಕೆ ಅವಕಾಶ ಸಿಗಲಿಲ್ಲ ಎಂದು ಚೌಧರಿ ಹೇಳಿದ್ದಾರೆ.
ಮಂಗಳವಾರ ಮುಂಜಾನೆ, ಕಾಂಗ್ರೆಸ್ ನಾಯಕರು ಸಂಸತ್ತಿನಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ವೇಳೆ ಈ ವಿಚಾರ ಗಮನಕ್ಕೆ ಬಂದಿದ್ದು ಅಲ್ಲದೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ, “ಪೀಠಿಕೆಯಲ್ಲಿ ‘ಸಮಾಜವಾದಿ ಮತ್ತು ಜಾತ್ಯತೀತ’ ಪದಗಳು ಇರಲಿಲ್ಲ” ಎಂದು ಹೇಳಿದರು.
#WATCH | On the copies of the Constitution given to Parliamentarians, Congress Parliamentary Party chairperson Sonia Gandhi says, “In the preamble it (the words ‘socialist secular’) were not there.” pic.twitter.com/9NLVwZOA8Y
— ANI (@ANI) September 20, 2023
ಮಂಗಳವಾರ ನೂತನ ಸಂಸತ್ ಭವನದ ಉದ್ಘಾಟನೆಯ ದಿನದಂದು ಸಂಸತ್ತಿನ ಸದಸ್ಯರು ಭಾರತದ ಸಂವಿಧಾನದ ಪ್ರತಿ, ಸಂಸತ್ತಿಗೆ ಸಂಬಂಧಿಸಿದ ಪುಸ್ತಕಗಳು, ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಯನ್ನು ಸ್ವೀಕರಿಸಿದ್ದರು.
ನೂತನ ಸಂಸತ್ ಸಂಕೀರ್ಣವನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಎರಡನೇ ದಿನದ ವಿಶೇಷ ಸಂಸತ್ ಅಧಿವೇಶನ ಮಂಗಳವಾರ ಹೊಸ ಕಟ್ಟಡದಲ್ಲಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.