ಕುಪ್ವಾರ: ಉಗ್ರರ ಒಳನುಸುಳುವಿಕೆ ತಡೆದ ಪೊಲೀಸರು ಮತ್ತು ಸೇನೆ
Team Udayavani, Feb 16, 2023, 11:06 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಬುಧವಾರ ರಾತ್ರಿ ಕುಪ್ವಾರದ ಸೈದ್ ಪೋರಾ ಫಾರ್ವರ್ಡ್ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರ ಜಂಟಿ ತಂಡವು ಒಳ ನುಸುಳುತ್ತಿದ್ದ ಗುಂಪನ್ನು ತಡೆದ ಕೂಡಲೇ, ಭಯೋತ್ಪಾದಕರ ಗುಂಪು ಮತ್ತು ಭದ್ರತಾ ಪಡೆಗಳ ನಡುವೆ ಎನ್ ಕೌಂಟರ್ ನಡೆಯಿತು.
” ರಾತ್ರಿ, ಕುಪ್ವಾರ ಪೊಲೀಸರಿಗೆ ಖಚಿತ ಮಾಹಿತಿಯ ಆಧಾರದ ಮೇಲೆ, ಸೈನ್ಯ ಮತ್ತು ಪೊಲೀಸರ ಜಂಟಿ ತಂಡವು ಸೈದ್ ಪೋರಾ ಫಾರ್ವರ್ಡ್ ಪ್ರದೇಶದಲ್ಲಿ ನುಸುಳುತ್ತಿದ್ದ ಗುಂಪನ್ನು ತಡೆದಿದೆ. ಜಂಟಿ ತಂಡವು ಒಬ್ಬ ನುಸುಳುಕೋರನನ್ನು ಹತ್ಯೆ ಮಾಡಿದೆ. ಹುಡುಕಾಟ ಇನ್ನೂ ನಡೆಯುತ್ತಿದೆ” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಕಾರ್ಕಳದಲ್ಲೂ ಮಂಕಿಮ್ಯಾನ್ ಖ್ಯಾತಿಯ ಜ್ಯೋತಿರಾಜ್ ಬಹುಮಹಡಿ ಕಟ್ಟಡವೇರಿ ಸಾಹಸ
ಕುಪ್ವಾರ ಪೊಲೀಸರು ಒದಗಿಸಿದ ಮಾಹಿತಿಯ ಆಧಾರದ ಮೇಲೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
During the preceding night, based on a specific input generated by #Kupwara police, joint team of Army & #Police intercepted an infiltrating group in Saidpora forward area. The joint team has #neutralised one #infiltrator. Search is still going on. Further details shall follow.
— Kashmir Zone Police (@KashmirPolice) February 16, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.