ಪಾಕ್ ಜಿಂದಾಬಾದ್; 15 ಮಂದಿ ವಿರುದ್ಧದ ದೇಶದ್ರೋಹ ಆರೋಪ ವಾಪಸ್
Team Udayavani, Jun 22, 2017, 3:47 PM IST
ಬುರ್ಹಾನ್ ಪುರ್: ಇತ್ತೀಚೆಗೆ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಾಟದಲ್ಲಿ ಟೀಂ ಇಂಡಿಯಾವನ್ನು ಸೋಲಿಸಿ ಪಾಕ್ ತಂಡ ಗೆಲುವು ಸಾಧಿಸಿರುವುದಕ್ಕೆ ಸುಮಾರು 15 ಮಂದಿ ಯುವಕರು ಪಾಕಿಸ್ತಾನದ ಪರ ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಪ್ರಕರಣದಲ್ಲಿ 15 ಮಂದಿ ವಿರುದ್ಧ ದಾಖಲಿಸಿದ್ದ ದೇಶದ್ರೋಹದ ಆರೋಪವನ್ನು ಹಿಂಪಡೆಯಲು ಮಧ್ಯಪ್ರದೇಶದ ಅಧಿಕಾರಿಗಳು ನಿರ್ಧರಿಸಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ.
ಎಎನ್ಐ ವರದಿ ಪ್ರಕಾರ, ಹಿರಿಯ ಅಧಿಕಾರಿಗಳ ಅಣತಿಯ ಮೇರೆಗೆ ಮಧ್ಯಪ್ರದೇಶದ ಪೊಲೀಸರು ದೇಶದ್ರೋಹ ಆರೋಪವನ್ನು ಕೈಬಿಟ್ಟಿರುವುದಾಗಿ ಹೇಳಿದೆ. ಕೋಮು ಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದಡಿಯಲ್ಲಿ ಐಪಿಸಿ ಸೆಕ್ಷನ್ 153(ಎ) ಕಲಂ ಅನ್ವಯ 15 ಮಂದಿ ವಿರುದ್ಧ ಪೊಲೀಸರು ಆರೋಪ ದಾಖಲಿಸಿದ್ದರು.
ಮಧ್ಯಪ್ರದೇಶದ ಬುರ್ಹಾನ್ ಪುರ್ ಜಿಲ್ಲೆಯ 15 ಮಂದಿಯನ್ನು ಪೊಲೀಸರು ಪಾಕಿಸ್ತಾನದ ಪರ ಘೋಷಣೆ ಕೂಗಿ, ಪಟಾಕಿ ಸಿಡಿಸಿದ್ದ ಹಿನ್ನೆಲೆಯಲ್ಲಿ ಸಂಚು ಮತ್ತು ದೇಶದ್ರೋಹದ ಆರೋಪದ ಮೇಲೆ ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.