Pakistan ರಾಯಭಾರ ಕಚೇರಿಗೆ ಸೀಮಾ ದಾಖಲೆ ರವಾನೆ 

ಐದನೇ ತರಗತಿ ಓದಿದ್ದೇನೆ ಎಂದು ಹೇಳುವ ಸೀಮಾ ಬಾಯಲ್ಲಿ ಸ್ಪಷ್ಟ ಇಂಗ್ಲೀಷ್‌, ಹಿಂದಿ

Team Udayavani, Jul 25, 2023, 6:45 AM IST

Pakistan ರಾಯಭಾರ ಕಚೇರಿಗೆ ಸೀಮಾ ದಾಖಲೆ ರವಾನೆ 

ನೋಯ್ಡಾ: ಗುರುತು ಪರಿಶೀಲನೆಗಾಗಿ ಪಾಕಿಸ್ತಾನಿ ಪ್ರಜೆ ಸೀಮಾ ಗುಲಾಮ್‌ ಹೈದರ್‌ನಿಂದ ವಶಪಡಿಸಿಕೊಂಡ ದಾಖಲೆಗಳನ್ನು ದೆಹಲಿಯ ಪಾಕಿಸ್ತಾನಿ ರಾಯಭಾರಿ ಕಚೇರಿಗೆ ಕಳುಹಿಸಲಾಗಿದೆ ಎಂದು ನೋಯ್ಡಾ ಪೊಲೀಸರು ತಿಳಿಸಿದ್ದಾರೆ. ಪಬ್ಜಿ ಮೂಲಕ ಪರಿಚಿತನಾದ ನೋಯ್ಡಾ ನಿವಾಸಿ ಸಚಿನ್‌ ಮೀನಾರೊಂದಿಗೆ ಪ್ರೀತಿಯಲ್ಲಿ ಬಿದ್ದ ಸೀಮಾ, ತನ್ನ ನಾಲ್ವರು ಮಕ್ಕಳೊಂದಿಗೆ ಮೇನಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದು ನೆಲೆಸಿದ್ದಾಳೆ.

ಉತ್ತರಪ್ರದೇಶದ ಉಗ್ರ ನಿಗ್ರಹದಳದ ಅಧಿಕಾರಿಗಳು ಸೀಮಾ, ಆತನ ಪ್ರಿಯಕರ ಸಚಿನ್‌ ಮತ್ತು ಸಚಿನ್‌ ತಂದೆ ನೇತ್ರಾಪಾಲ್‌ ಸಿಂಗ್‌ನನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ. ಆಕೆಯಿಂದ ಐದು ಪಾಸ್‌ಪೋರ್ಟ್‌, ಹೆಸರು ಮತ್ತು ವಿಳಾಸ ಪೂರ್ಣವಿಲ್ಲದ ಒಂದು ಬಳಸದ ಪಾಸ್‌ಪೋರ್ಟ್‌, ನಾಲ್ಕು ಮೊಬೈಲ್‌ ಫೋನ್‌ಗಳು ಮತ್ತು ಒಂದು ಗುರುತಿನ ಪತ್ರವನ್ನು ಎಟಿಎಸ್‌ ವಶಪಡಿಸಿಕೊಂಡಿದೆ.

ಹಲವು ಅನುಮಾನಗಳಿಗೆ ಕಾರಣ: ಸೀಮಾ ತಾನು ಐದನೇ ತರಗತಿ ಮಾತ್ರ ಓದಿರುವುದಾಗಿ ಹೇಳುತ್ತಾರೆ. ಆದರೆ ನಿರರ್ಗಳವಾಗಿ ಇಂಗ್ಲಿಷ್‌ ಮಾತನಾಡುತ್ತಾರೆ ಮತ್ತು ಟೆಕ್ಸ್ಟ್ ಮಾಡುತ್ತಾರೆ. ಎಟಿಎಸ್‌ ಅಧಿಕಾರಿಗಳು ಪರೀಕ್ಷಿಸಿದಾಗಲೂ ಸುಲಲಿತವಾಗಿ ಇಂಗ್ಲೀಷ್‌ನಲ್ಲಿ ಮಾತನಾಡಿದ್ದಾರೆ. ಅಲ್ಲದೇ ಹಿಂದಿಯನ್ನು ಕೂಡ ಸ್ಪಷ್ಟವಾಗಿ ಮಾತನಾಡುತ್ತಾರೆ. ಸೀಮಾ ಅವರ ಸಹೋದರ ಮತ್ತು ಚಿಕ್ಕಪ್ಪ ಪಾಕ್‌ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ನಾಲ್ಕು ಮೊಬೈಲ್‌ಗ‌ಳನ್ನು ಆಕೆ ಹೊಂದಿದ್ದು, ಅವುಗಳ ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೀಮಾ ಪತಿ ಗುಲಾಮ್‌ ಹೈದರ್‌ ಸದ್ಯ ಸೌದಿ ಅರೇಬಿಯದಲ್ಲಿ ನೆಲೆಸಿದ್ದಾರೆ. ಈಕೆ ಪಾಕಿಸ್ತಾನದಿಂದ ದುಬೈಗೆ ತೆರಳಿ, ಅಲ್ಲಿಂದ ನೇಪಾಳದ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಇನ್ನೊಂದೆಡೆ, ಆಕೆ ನಾಲ್ವರು ಮಕ್ಕಳನ್ನು ಮೊದಲು ನೇಪಾಳದಿಂದ ಭಾರತಕ್ಕೆ ಕಳುಹಿಸಿ, ನಂತರ ಆಕೆ ಪ್ರತ್ಯೇಕವಾಗಿ ಭಾರತಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಅಂಶಗಳು ಅನುಮಾನ ಮೂಡಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಿಯಕರನನ್ನು ಭೇಟಿಯಾಗಲು ಪಾಕ್‌ಗೆ ತೆರಳಿದ ಭಾರತೀಯ ಮಹಿಳೆ!
ರಾಜಸ್ಥಾನದ ವಿವಾಹಿತ ಮಹಿಳೆಯೊಬ್ಬಳು, ಫೇಸ್‌ಬುಕ್‌ ಮೂಲಕ ಪರಿಚಯವಾದ ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಅಪ್ಪರ್‌ದಿರ್‌ ಜಿಲ್ಲೆಗೆ ತೆರಳಿದ್ದಾರೆ.
ಉತ್ತರಪ್ರದೇಶ ಮೂಲದ ಅಂಜು (34), ಕ್ರೈಸ್ತಮತಕ್ಕೆ ಮತಾಂತರಗೊಂಡು, ಅರವಿಂದ್‌ ಎಂಬುವವರನ್ನು ಮದುವೆಯಾಗಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ರಾಜಸ್ಥಾನದ ಆಲ್ವಾರ್‌ ಜಿಲ್ಲೆಯಲ್ಲಿ ವಾಸವಿದ್ದಾರೆ. ಕೆಲ ತಿಂಗಳ ಹಿಂದೆ ಅಂಜು ಅವರಿಗೆ ಫೇಸ್‌ಬುಕ್‌ ಮೂಲಕ ಪಾಕಿಸ್ತಾನದ ನಸ್ರುಲ್ಲಾ (29) ಪರಿಚಯವಾಗಿದೆ. ಇದು ಪ್ರೇಮಕ್ಕೆ ತಿರುಗಿದೆ. ಆತನನ್ನು ಕಾಣಲು ಪಾಕ್‌ ವೀಸಾದೊಂದಿಗೆ ಆಕೆ ಪಾಕಿಸ್ತಾನಕ್ಕೆ ತೆರಳಿದ್ದಾರೆ.

“ಅಂಜು ಅವರ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಎಲ್ಲವೂ ಕ್ರಮಬದ್ಧವಾಗಿದೆ. ಅವರು ಒಂದು ತಿಂಗಳ ವೀಸಾ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರಿಗೆ ಭದ್ರತೆ ನೀಡಲಾಗಿದೆ’ ಎಂದು ಪಾಕ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.