ಫಸಲ್ ವಿಮಾ ರೈತರ ಆಯ್ಕೆ
ಯೋಜನೆಯಲ್ಲಿನ ದುರುಪಯೋಗ ತಡೆಯಲು ಈ ಕ್ರಮ
Team Udayavani, Feb 20, 2020, 6:45 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೃಷಿ ವಿಮಾ ಯೋಜನೆಯಾದ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ (ಪಿಎಂಎಫ್ಬಿವೈ)ಯನ್ನು ಇನ್ನು ಮುಂದೆ ರೈತರ ಆಯ್ಕೆಗೆ ಬಿಡಲು ನಿರ್ಧರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಕೃಷಿ ವಿಮೆಯ ಹೆಸರಲ್ಲಿ ಉಂಟಾಗುತ್ತಿರುವ ವಂಚನೆ ತಪ್ಪಿಸಲು ಈ ನಿರ್ಧಾರ ಸಹಕಾರಿಯಾಗಲಿದೆ ಎಂದು ಸಂಪುಟ ಸಭೆಯ ಬಳಿಕ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಹೇಳಿದರು. ಸದ್ಯ ಶೇ.58ರಷ್ಟು ಮಂದಿ ಈ ಯೋಜನೆಯ ವ್ಯಾಪ್ತಿಯಲ್ಲಿದ್ದಾರೆ. ಇದುವರೆಗೆ 60 ಸಾವಿರ ಕೋಟಿ ರೂ. ಮೌಲ್ಯದ ಕ್ಲೇಮುಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು ಸಿಂಗ್.
ಬೆಳೆ ವಿಮೆ ಯೋಜನೆಯ ಅನುಷ್ಠಾನದಲ್ಲಿನ ಸವಾಲುಗಳನ್ನು ಪರಿಹರಿಸುವ ನಿಟ್ಟಿ ನಲ್ಲೂ ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ. 2016ರ ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಅವರು ಫಸಲ್ ವಿಮಾ ಯೋಜನೆಗೆ ಚಾಲನೆ ನೀಡಿದ್ದರು. ಸಾಲ ಪಡೆಯುವ ಎಲ್ಲ ರೈತರೂ ಈ ವಿಮೆಯನ್ನು ಹೊಂದುವುದನ್ನು ಕಡ್ಡಾಯ ಮಾಡಲಾಗಿತ್ತು.
ಹೈನುಗಾರಿಕೆಗೆ 4,558 ಕೋ. ರೂ.
ಮತ್ತೂಂದು ಮಹತ್ವದ ನಿರ್ಣಯ ದಲ್ಲಿ ಕೇಂದ್ರ ಸಂಪುಟ ಹೈನುಗಾರಿಕೆ ಕ್ಷೇತ್ರಕ್ಕೆ 4,558 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ ನೀಡಿದೆ. ಇದರಿಂದಾಗಿ ದೇಶದಲ್ಲಿನ 95 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಮತ್ತೂಂದು ಪ್ರಮುಖ ನಿರ್ಧಾರದಲ್ಲಿ ಬಡ್ಡಿ ವಿನಾಯಿತಿ ಪ್ರಮಾಣವನ್ನು ಶೇ.2ರಿಂದ ಶೇ.2.5ಕ್ಕೆ ಪರಿಷ್ಕರಿಸುವ ಬಗ್ಗೆಯೂ ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.