Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Team Udayavani, Nov 29, 2024, 3:16 PM IST
ಗುಜರಾತ್: 19 ವರ್ಷದ ಯುವತಿಯನ್ನು ಅತ್ಯಾಚಾರಗೈದು ಹತ್ಯೆ ನಡೆಸಿದ ಆರೋಪದ ಮೇಲೆ ತನಿಖೆ ನಡೆಸಿದ ಗುಜರಾತ್ ಪೊಲೀಸರು ಹರಿಯಾಣ ಮೂಲದ ಆರೋಪಿಯನ್ನು ಬಂಧಿಸಿದ್ದು ಇದೀಗ ಆತನನ್ನು ವಿಚಾರಣೆ ನಡೆಸಿದ ವೇಳೆ ಆಘಾತಕಾರಿ ಅಂಶಗಳು ಹೊರಬಿದ್ದಿವೆ ಅಲ್ಲದೆ ಆತ ಓರ್ವ ಸರಣಿ ಹಂತಕನಾಗಿದ್ದು ಅಷ್ಟು ಮಾತ್ರವಲ್ಲದೆ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳದಲ್ಲಿ ಹತ್ಯೆಗಳನ್ನು ಮಾಡಿದ್ದು ನಾಲ್ಕು ರಾಜ್ಯದ ಪೊಲೀಸರಿಗೆ ಬೇಕಾಗಿದ್ದ ಸೀರಿಯಲ್ ಕಿಲ್ಲರ್ ಎಂಬುದು ತನಿಖೆ ವೇಳೆ ಗೊತ್ತಾಗಿದೆ.
ಸರಣಿ ಹಂತಕನನ್ನು ಹರಿಯಾಣದ ರೋಹ್ಟಕ್ ಮೂಲದ ರಾಹುಲ್ ಸಿಂಗ್ ಜಾಟ್(29) ಎನ್ನಲಾಗಿದೆ.
ರಾಹುಲ್ ಕೇವಲ ಒಂದು ತಿಂಗಳಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ನಾಲ್ಕು ಕೊಲೆಗಳನ್ನು ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಅಲ್ಲದೆ ಈತ ರೈಲಿನಲ್ಲೇ ಹೆಚ್ಚಿನ ಕೃತ್ಯಗಳನ್ನು ಎಸಗುತ್ತಿದ್ದ ಎಂಬುದೇ ಆಘಾತಕಾರಿ ಸಂಗತಿ.
ನವೆಂಬರ್ 14ರಂದು ಗುಜರಾತ್ ನ ಉದ್ವಾಡ ರೈಲು ನಿಲ್ದಾಣದ ಸಮೀಪದ ರೈಲು ಹಳಿಯ ಪಕ್ಕದಲ್ಲಿ 19 ವರ್ಷದ ಯುವತಿಯ ಶವ ಪತ್ತೆಯಾಗಿತ್ತು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಗುಜರಾತ್ ರೈಲು ನಿಲ್ದಾಣದ ಬಳಿ ನವೆಂಬರ್ 24ರಂದು ಹರಿಯಾಣ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ವಿಚಾರಣೆ ವೇಳೆ ಸರಣಿ ಹತ್ಯೆಯ ವಿಚಾರ ಬೆಳಕಿಗೆ:
ಯುವತಿಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಬಂಧಿಯಾಗಿದ್ದ ರಾಹುಲ್ ವಿಚಾರಣೆ ವೇಳೆ ತಾನು ಕಳೆದ ಒಂದು ತಿಂಗಳಲ್ಲಿ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಟ್ಟು ನಾಲ್ಕು ಹತ್ಯೆಗಳನ್ನು ನಡೆಸಿರುವುದಾಗಿ ಹೇಳಿದ್ದಾನೆ ಅಲ್ಲದೆ ಎಲ್ಲ ಕೃತ್ಯಗಳನ್ನು ರೈಲಿನಲ್ಲೇ ನಡೆಸುತ್ತಿದ್ದ ಎಂಬುದು ಆಘಾತಕಾರಿ ಸಂಗತಿಯಾಗಿದೆ. ಬೇರೆ ರಾಜ್ಯಗಳಿಗೆ ತೆರಳಿ ಅಲ್ಲಿನ ರೈಲಿನಲ್ಲಿ ಸಂಚರಿಸಿ ಮಹಿಳೆಯರನ್ನು ಬೆದರಿಸಿ ಅವರಿಂದ ಚಿನ್ನ ಹಣ ಲೂಟಿ ಮಾಡಿ ಹತ್ಯೆಗೈಯ್ಯುತ್ತಿದ್ದನಂತೆ ಹೀಗಾಗಿ ನಾಲ್ಕು ರಾಜ್ಯಕ್ಕೆ ಸರಣಿ ಹಂತಕ ಬೇಕಾಗಿದ್ದ ಎನ್ನಲಾಗಿದೆ.
ಹಂತಕನ ಸುಳಿವು ಸಿಕ್ಕಿದ್ದು ಹೇಗೆ:
ಗುಜರಾತ್ ನ ಉದ್ವಾಡ ರೈಲು ನಿಲ್ದಾಣದ ಬಳಿ ಯುವತಿ ಟ್ಯೂಷನ್ ಮುಗಿಸಿ ಸಂಜೆ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ರಾಹುಲ್ ಏಕಾಏಕಿ ಯುವತಿಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರಗೈದು ಹತ್ಯೆ ನಡೆಸಿದ ಬಳಿಕ ಹಂತಕ ರಾಹುಲ್ ಹತ್ಯೆ ನಡೆಸಿದ ಸ್ಥಳದಲ್ಲಿ ಆತನ ಟಿ ಶರ್ಟ್ ಹಾಗೂ ಬ್ಯಾಗ್ ಬಿಟ್ಟು ಓಡಿ ಹೋಗಿದ್ದ ಇದರಿಂದ ಪೊಲೀಸರಿಗೆ ಹಂತಕನ ಜಾಡು ಪತ್ತೆಹಚ್ಚಲು ಸುಲಭವಾಯಿತು.
2000 ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ:
ಆರೋಪಿಯ ಬಂಧನಕ್ಕೆ ಗುಜರಾತ್ ಪೊಲೀಸರು ಸುಮಾರು ಹತ್ತು ತಂಡವನ್ನು ರಚಿಸಿದ್ದರು ಅಲ್ಲದೆ ಆರೋಪಿಯನ್ನು ಪತ್ತೆ ಹಚ್ಚಲು ನಗರದ ಸುಮಾರು 2000 ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.