Tamil Nadu;ವಿಧೇಯಕ ಅಂಕಿತಕ್ಕೆ ಕಾಲಮಿತಿ: ನಿರ್ಣಯ
Team Udayavani, Apr 11, 2023, 7:55 AM IST
ಚೆನ್ನೈ:ವಿಧಾನಸಭೆಯಲ್ಲಿ ಅಂಗೀಕಾರಗೊಂಡ ವಿಧೇಯಕಗಳನ್ನು ಅಂಕಿತ ಹಾಕಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿ ಪಡಿಸುವಂತೆ ಕೇಂದ್ರ ಸರಕಾರ ಮತ್ತು ರಾಷ್ಟ್ರಪತಿಯವರಿಗೆ ಮನವಿ ಮಾಡುವ ಕುರಿತು ಸೋಮವಾರ ತಮಿಳುನಾಡು ವಿಧಾನಸಭೆ ನಿರ್ಣಯ ಅಂಗೀಕರಿಸಿದೆ.
ನಿರ್ಣಯ ಮಂಡಿಸಿ ಮಾತನಾ ಡಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಲವು ವಿಧೇಯಕಗಳನ್ನು ಅಂಗೀಕಾರಕ್ಕಾಗಿ ಬಾಕಿ ಇರಿಸಿಕೊಂಡಿರುವ ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಕೇಂದ್ರ ಸರಕಾರ ಸೂಕ್ತ ಸಲಹೆ ನೀಡಬೇಕು ಎಂದು ಆಗ್ರಹಿಸಿದರು.
“ರಾಜ್ಯಪಾಲರು ರಾಜಭವನ ವನ್ನು ರಾಜಕೀಯ ಭವನವನ್ನಾಗಿ ಮಾರ್ಪಾಡು ಮಾಡುತ್ತಿದ್ದಾರೆ. ವಿಧೇಯಕಗಳಿಗೆ ಅಂಗೀಕಾರ ನೀಡದೆ, ಆರ್.ಎನ್.ರವಿ ಅವರು ತಮಗೆ ಇಷ್ಟ ಬಂದಂತೆ ವರ್ತಿಸುತ್ತಿದ್ದಾರೆ’ ಎಂದು ದೂರಿದರು.
ನೀಟ್ನಿಂದ ತಮಿಳುನಾ ಡನ್ನು ಹೊರಗೆ ಉಳಿಯಲು ಅನು ಮತಿ ನೀಡಬೇಕು ಎಂಬ ವಿಧೇಯಕ ರಾಜ್ಯಪಾಲರ ಅಂಗೀ ಕಾ ರಕ್ಕಾಗಿ ಕಾಯುತ್ತಿದೆ. ಇದಾದ ಬೆನ್ನಲ್ಲೇ, ಆನ್ಲೈನ್ ಗೇಮಿಂಗ್ ನಿಷೇಧ ವಿಧೇಯಕಕ್ಕೆ ರಾಜ್ಯಪಾಲ ರವಿ ಸಹಿ ಹಾಕಿದ್ದಾರೆ. 131 ದಿನಗಳ ಕಾಲ ವಿಧೇ ಯಕವನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದ ಅವರು ಕಳೆದ ತಿಂಗಳು ಸರಕಾರಕ್ಕೆ ವಾಪಸ್ ಕಳುಹಿಸಿದ್ದರು. “ವಿಧೇಯಕ ತಡೆಹಿಡಿಯ ಲಾಗಿದೆ ಎಂದರೆ ತಿರಸ್ಕರಿಸಲಾಗಿದೆ ಎಂದು ಪರಿಗಣಿಸ ಬೇಕು’ ಎಂದು ಹೇಳಿ ವಿವಾದ ಉಂಟು ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.