ದಿನಕ್ಕೊಂದು ಬಾರಿ ಮಾತ್ರ ಧ್ವನಿವರ್ಧಕದಲ್ಲಿ ಅಝಾನ್: ಕೇರಳ ಮಸೀದಿ
Team Udayavani, Jun 15, 2017, 4:11 PM IST
ಕೊಚ್ಚಿ : ಶಬ್ದ ಮಾಲಿನ್ಯದ ದೂರುಗಳು ಹೆಚ್ಚುತ್ತಿರುವುದನ್ನು ಅನುಸರಿಸಿ ಕೇರಳದ ಮುಸ್ಲಿಂ ಬಹುಸಂಖ್ಯಾಕ ಮಲಪ್ಪುರಂ ಜಿಲ್ಲೆಯ ಪ್ರಮುಖ ಮಸೀದಿಯೊಂದು ಈಗ ಸಾಗುತ್ತಿರುವ ಪವಿತ್ರ ರಮ್ಜಾನ್ ತಿಂಗಳಲ್ಲಿ ದಿನಕ್ಕೆ ಒಂದು ಬಾರಿ ಮಾತ್ರವೇ ಧ್ವನಿ ವರ್ಧಕದ ಮೂಲಕ ಅಝಾನ್ ಬಿತ್ತರಿಸಲು ನಿರ್ಧರಿಸಿದೆ.
ಮಲಪ್ಪುರಂ ಜಿಲ್ಲೆಯ ವಳಕ್ಕಾಡ್ ಪ್ರದೇಶದಲ್ಲಿನ ಅತೀ ದೊಡ್ಡ ವಾಲಿಯಾ ಜುಮ್ಮಾ ಮಸೀದಿಯು ದಿನಕ್ಕೆ ಒಂದು ಬಾರಿ ಮಾತ್ರವೇ ಧ್ವನಿ ವರ್ಧಕದ ಮೂಲಕ ಅಝಾನ್ ಬಿತ್ತರಿಸಲು ನಿರ್ಧರಿಸಿದ್ದು ಇದನ್ನು ಸುತ್ತಮುತ್ತಲಿನ ಇತರ 17 ಸಣ್ಣ ಮಸೀದಿಗಳು ಅನುಸರಿಸಲಿವೆ ಮತ್ತು ಆ ಮೂಲಕ ಯಾವುದೇ ಸದ್ದು-ಗದ್ದಲ ಆಗದಂತೆ ಸಹಕರಿಸಲು ನಿರ್ಧರಿಸಿವೆ ಎಂದು ಹಿಂದುಸ್ಥಾನ್ ಟೈಮ್ಸ್ ಇಂದು ಗುರುವಾರ ವರದಿ ಮಾಡಿದೆ.
ಈ ಮಸೀದಿಗಳ ಸಮಿತಿಯ ಸದಸ್ಯರ ಈಚಿನ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು. ಮಾತ್ರವಲ್ಲದೆ ಮಸೀದಿಯ ಉಳಿದೆಲ್ಲ ಧಾರ್ಮಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳ ಬಳಕೆಯನ್ನು ನಿಲ್ಲಿಸಲು ಕೂಡ ನಿರ್ಧರಿಸಿತು.
ಸಭೆಯಲ್ಲಿ ಮೊದಲು ಅನೇಕರು ಈ ನಿರ್ಧಾರವನ್ನು ವಿರೋಧಿಸಿದರು. ಆದರೆ ಸಮೀಪದ ಶಾಲೆಗಳು ಮತ್ತು ಆಸ್ಪತ್ರೆಗಳಿಂದ ಧ್ವನಿ ವರ್ಧಕಗಳ ಬಳಕೆ ವಿರುದ್ಧ ದೂರುಗಳು ಬಂದಿರುವುದನ್ನು ಲೆಕ್ಕಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು ಎಂದು ಮಹಲ್ ಕೌನ್ಸಿಲ್ ಅಧ್ಯಕ್ಷ ಅಬ್ದುಲ್ ಅಜೀಜ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.