Landslide: ಭಾರಿ ಮಳೆಗೆ ನಲುಗಿದ ಹಿಮಾಚಲ: ಕುಸಿದು ಬಿದ್ದ ಕಟ್ಟಡ, ಹಲವರು ಸಿಲುಕಿರುವ ಶಂಕೆ
Team Udayavani, Aug 24, 2023, 10:56 AM IST
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಭಾರೀ ಭೂಕುಸಿತ ಸಂಭವಿಸಿದ್ದು, ಹಲವಾರು ಮನೆಗಳು ನಾಶವಾಗಿದ್ದು, ಅನೇಕ ಜನರು ಅವಶೇಷಗಳಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಭೂಕುಸಿತದಿಂದ ಇಳಿಜಾರು ಪ್ರದೇಶದಲ್ಲಿದ್ದ ಅನೇಕ ಬಹುಮಹಡಿ ಕಟ್ಟಡಗಳು ಕುಸಿದು ಬೀಳುವ ಭೀಕರ ದೃಶ್ಯ ಸೆರೆಯಾಗಿದೆ, ಅಲ್ಲದೆ ಕಟ್ಟಡ ಕುಸಿದು ಬಿದ್ದ ಸ್ಥಳದಲ್ಲಿ ದಟ್ಟ ಧೂಳು ಆವರಿಸಿದ್ದು ಮೈ ಜುಮ್ ಎನ್ನುವಂತಿದೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ್ ನಲ್ಲಿ ಸುಮಾರು ಹನ್ನೆರಡು ಮಂದಿ ಮೃತಪಟ್ಟಿದ್ದು ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಭಾರೀ ಮಳೆಯಿಂದ ಉಂಟಾದ ಮೇಘಸ್ಫೋಟ ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ 12 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬುಧವಾರ ಮತ್ತೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಇದುವರೆಗೆ ಮಳೆಯಿಂದ ಸಂಭವಿಸಿದ ಭೂಕುಸಿತದಿಂದಾಗಿ 400 ಕ್ಕೂ ಹೆಚ್ಚು ರಸ್ತೆಗಳನ್ನು ಬಂದ್ ಆಗಿದ್ದು ಮತ್ತು ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Several buildings collapsed in Anni of Kullu district in Himachal Pradesh#collapse #buildings #PragyanRover #Chandrayaan3 #praggnanandha #Science #Geology #Tragedia #Tragedy #HimachalDisaster #HimachalPradesh #TrendingNews #BreakingNews pic.twitter.com/NJvwA2N6mK
— Samantha (@Samantha_eth__) August 24, 2023
ಹಿಮಾಚಲದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಭಾರತೀಯ ಹವಾಮಾನ ಇಲಾಖೆ ಮುಂದಿನ 24 ಗಂಟೆಗಳ ಕಾಲ ಶಿಮ್ಲಾ ಸೇರಿದಂತೆ ಕಂಗ್ರಾ, ಕುಲು, ಮಂಡಿ, ಸೋಲನ್ ಮತ್ತು ಸಿರ್ಮೌರ್ ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ “ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ. ಏತನ್ಮಧ್ಯೆ, ಶಿಮ್ಲಾ, ಸಿರ್ಮೌರ್, ಕಂಗ್ರಾ, ಚಂಬಾ, ಮಂಡಿ, ಹಮೀರ್‌ಪುರ್, ಸೋಲನ್, ಬಿಲಾಸ್‌ಪುರ್ ಮತ್ತು ಕುಲು ಒಂಬತ್ತು ಜಿಲ್ಲೆಗಳಲ್ಲಿ ಮಳೆಯಿಂದ ಅಧಿಕ ಪ್ರವಾಹ ಸಂಭವಿಸುವ ಎಚ್ಚರಿಕೆಯನ್ನು ನೀಡಿದೆ.
ಶಾಲಾ ಕಾಲೇಜುಗಳಿಗೆ ರಜೆ:
ಭಾರೀ ಮಳೆಯ ಹಿನ್ನೆಲೆಯಲ್ಲಿ ಶಿಮ್ಲಾ, ಮಂಡಿ ಮತ್ತು ಸೋಲನ್ ಜಿಲ್ಲೆಗಳಲ್ಲಿ ಬುಧವಾರದಿಂದ ಎರಡು ದಿನಗಳ ಕಾಲ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಸಾಲುಗಟ್ಟಿ ನಿಂತ ವಾಹನಗಳು:
ಕುಲು ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆಯಿಂದಾಗಿ ಕುಲು-ಮಂಡಿ ರಸ್ತೆ ಹಾಳಾಗಿದ್ದರಿಂದ ನೂರಾರು ವಾಹನಗಳು ಸಿಲುಕಿಕೊಂಡಿವೆ. ಪಾಂಡೋ ಮೂಲಕ ಪರ್ಯಾಯ ಮಾರ್ಗವೂ ಹಾಳಾಗಿದೆ. ಡೆಬ್ರಿಸ್ ಪ್ರದೇಶದಲ್ಲಿ ಮಣ್ಣು ತೆರವು ಕಾರ್ಯ ನಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಮಾಹಿತಿಯ ಪ್ರಕಾರ ರಾಷ್ಟ್ರೀಯ ಹೆದ್ದಾರಿ 21 (ಮಂಡಿ-ಕುಲು ರಸ್ತೆ) ಮತ್ತು ಎನ್‌ಎಚ್ 154 (ಮಂಡಿ-ಪಠಾಣ್‌ಕೋಟ್) ಪೀಡಿತ ರಸ್ತೆಗಳು ಬಂದ್ ಆಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರಿ ಮಳೆಗೆ ರಾಜ್ಯದಲ್ಲಿ ಒಟ್ಟು 709 ರಸ್ತೆಗಳನ್ನು ಈಗಾಗಲೇ ಮುಚ್ಚಲಾಗಿದೆ, ಭೂ ಕುಸಿತದಿಂದ ಹಲವೆಡೆ ಮನೆಗಳು ಬಿರುಕು ಬಿಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಜನರನ್ನು ಸ್ಥಳಾಂತರಿಸಲಾಗುತ್ತಿದೆ.
ಹಿಮಾಚಲ ಪ್ರದೇಶದಲ್ಲಿ ಈ ತಿಂಗಳು ಮಳೆ ಸಂಬಂಧಿತ ಘಟನೆಗಳಲ್ಲಿ 120 ಜನರು ಸಾವನ್ನಪ್ಪಿದ್ದರೆ, ಜೂನ್ 24 ರಂದು ರಾಜ್ಯದಲ್ಲಿ ಮಾನ್ಸೂನ್ ಪ್ರಾರಂಭವಾದಾಗಿನಿಂದ ಒಟ್ಟು 238 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Chandrayaan-3: ಲ್ಯಾಂಡರ್‌ನಿಂದ ಹೊರಬಂದು ಚಂದ್ರನ ಮೇಲೆ ಕಾರ್ಯ ಆರಂಭಿಸಿದ ರೋವರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.