ಭಾರತದ ಕೈತಪ್ಪಿದ ಸೆಷಲ್ಸ್ ನೌಕಾನೆಲೆ
Team Udayavani, Jun 23, 2018, 6:00 AM IST
ನವದೆಹಲಿ: ಹಿಂದೂ ಮಹಾಸಾಗರದಲ್ಲಿನ ಮಹತ್ವದ ನೆಲೆಯಾದ ಸೆಷಲ್ಸ್‌ನಲ್ಲಿ ಭಾರತ ಯೋಜಿಸಿದ್ದ ನೌಕಾ ನೆಲೆ ನಿರ್ಮಾಣ ಯೋಜನೆಗೆ ಹಿನ್ನಡೆಯಾಗಿದೆ. ಭಾರತಕ್ಕೆ ನೌಕಾನೆಲೆ ಸ್ಥಾಪಿಸಲು ಅವಕಾಶ ನೀಡುವ ಸಂಬಂಧ ಮಾಡಿಕೊಳ್ಳಲಾಗಿದ್ದ ಒಪ್ಪಂದವನ್ನು ಸೆಷಲ್ಸ್ ಸಂಸತ್ತಿನಲ್ಲಿ ಮಂಡಿಸದೇ ಇರಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಸೆಷಲ್ಸ್‌ನ ಅಸಂಪ್ಷನ್ ಎಂಬ ದ್ವೀಪದಲ್ಲಿ ನೌಕಾನೆಲೆ ನಿರ್ಮಾಣಕ್ಕೆ ಕಳೆದ ಜನವರಿಯಲ್ಲಿ ಉಭಯ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿದ್ದವು. ಆದರೆ, ಸೆಷಲ್ಸ್‌ನಲ್ಲಿ ಈ ಒಪ್ಪಂದ ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಭಾರತಕ್ಕೆ ನೌಕಾ ನೆಲೆ ಅಭಿವೃದ್ಧಿಗೆ ಅವಕಾಶ ನೀಡುವುದಕ್ಕೆ ಅಲ್ಲಿನ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಅಷ್ಟೇ ಅಲ್ಲ, ಸಾರ್ವಜನಿಕರೂ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಹಿಂದೂ ಮಹಾಸಾಗರದಲ್ಲಿ ಅತಿ ಹೆಚ್ಚು ವಾಣಿಜ್ಯ ಹಡಗುಗಳು ಸಾಗುವ ಮಾರ್ಗಕ್ಕೆ ಸಮೀಪದಲ್ಲಿ ಈ ಅಸಂಪ್ಷನ್ ದ್ವೀಪವಿದೆ. ಇಲ್ಲಿ ಭಾರತಕ್ಕೆ ಅವಕಾಶ ನೀಡಿದರೆ, ಸೆಷಲ್ಸ್ ದ್ವೀಪ ಸಮೂಹದ ಸಾರ್ವಭೌಮತೆಗೆ ಧಕ್ಕೆ ಉಂಟಾಗುತ್ತದೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ಸೆಷಲ್ಸ್ ಸಂಸತ್ತು ಒಪ್ಪಂದದ ವಿಚಾರದಲ್ಲಿ ಮುಂದುವರಿಯದೇ ಇರಲು ನಿರ್ಧರಿಸಿದೆ ಎಂದು ಸೆಷೆಲ್ಸ್ ವಿದೇಶಾಂಗ ಕಾರ್ಯದರ್ಶಿ ಬೆರ್ರಿ ಫಾರೆ ಹೇಳಿದ್ದಾರೆ. ಒಪ್ಪಂದ ರದ್ದುಗೊಳಿಸಿಲ್ಲ. ಬದಲಿಗೆ ಸಂಸತ್ತಿನಲ್ಲಿ ಇದನ್ನು ಮಂಡಿಸದೇ ಇರಲು ಸರ್ಕಾರ ನಿರ್ಧರಿಸಿದೆ. ಆದರೆ ಭಾರತ ಈಗಾಗಲೇ ಈ ಒಪ್ಪಂದವನ್ನು ಅನುಮೋದಿಸಿದೆ.
ಸೆಷಲ್ಸ್ ಅಧ್ಯಕ್ಷ ಭಾರತಕ್ಕೆ: ಸೆಷಲ್ಸ್ ಅಧ್ಯಕ್ಷ ಡ್ಯಾನಿ ಫಾರೆ ಶುಕ್ರವಾರ ಭಾರತಕ್ಕೆ ಭೇಟಿ ನೀಡಿದ್ದು, 6 ದಿನಗಳವರೆಗೆ ಭಾರತದಲ್ಲಿ ಇರಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಆದರೆ ಈ ಒಪ್ಪಂದಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಯೋಜನೆಯನ್ನು ಭಾರತೊಂದಿಗೆ ಮುಂದುವರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ವರ್ಷದ ಬಜೆಟ್‌ನಲ್ಲಿ ಈ ಯೋಜನೆಗೆ ಹಣ ಮೀಸಲಿಟ್ಟು, ಅಭಿವೃದ್ಧಿಪಡಿ ಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.