![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jun 16, 2024, 7:12 PM IST
ಹೊಸದಿಲ್ಲಿ: ಉಗ್ರರ ವಿರುದ್ದದ ಹೋರಾಟದಲ್ಲಿ ಯಶಸ್ಸನ್ನು ಸಾಧಿಸಲು ಕಾಶ್ಮೀರದಲ್ಲಿ ಮಾಡಿದಂತೆ ಜಮ್ಮು ವಿಭಾಗದಲ್ಲಿ ಪ್ರದೇಶ ಪ್ರಾಬಲ್ಯ ಮತ್ತು ಶೂನ್ಯ ಭಯೋತ್ಪಾದನಾ ಯೋಜನೆಗಳನ್ನು ಜಾರಿಗೆ ತರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಭದ್ರತಾ ಏಜೆನ್ಸಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಇತ್ತೀಚೆಗೆ ನಿರಂತರವಾಗಿ ಉಗ್ರರ ದಾಳಿಗಳು ನಡೆದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಕರೆದಿದ್ದ ಉನ್ನತ ಮಟ್ಟದ ಸಭೆಯಲ್ಲಿ, ‘ನವೀನ ವಿಧಾನಗಳ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರನ್ನು ಹತ್ತಿಕ್ಕುವ ಮೂಲಕ ”ಮೋದಿ ಸರ್ಕಾರ ಮಾದರಿ”ಯನ್ನು ಸ್ಥಾಪಿಸಲು ಬದ್ಧವಾಗಿದೆ’ ಎಂದು ಶಾ ಹೇಳಿದ್ದಾರೆ.
ಸಭೆಯಲ್ಲಿ ಜೂನ್ 29 ರಂದು ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಯ ಭದ್ರತಾ ಸಿದ್ಧತೆಗಳನ್ನು ಅವರು ಪರಿಶೀಲಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಕುರಿತು ಗೃಹ ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಪ್ರಧಾನಿಯವರ ನಿರ್ದೇಶನದಂತೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ಮುಂದಿನ ದಿನಗಳಲ್ಲಿ ಭದ್ರತಾ ಪಡೆಗಳು ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸುವ ನಿರೀಕ್ಷೆಯಿದೆ.
You seem to have an Ad Blocker on.
To continue reading, please turn it off or whitelist Udayavani.