ಶಾ ಪುತ್ರನ ಸಮರ್ಥನೆ ಬೇಕಾಗಿರಲಿಲ್ಲ: ಸಿನ್ಹಾ
Team Udayavani, Oct 12, 2017, 7:15 AM IST
ಪಟ್ನಾ/ಅಹಮದಾಬಾದ್: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪುತ್ರನನ್ನು ಸಮರ್ಥನೆ ಮಾಡಿಕೊಂಡಿದ್ದರಿಂದಾಗಿ ಪಕ್ಷ ಇದುವರೆಗೆ ಕಾಪಾಡಿಕೊಂಡು ಬಂದಿದ್ದ ಉನ್ನತ ಮಟ್ಟದ ನೈತಿಕ ವ್ಯವಸ್ಥೆ ಕೊಚ್ಚಿ ಹೋದಂತಾಗಿದೆ. ಇಂಥ ಕ್ರಮ ಬೇಕಾಗಿರಲಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಪಕ್ಷದ ನಾಯಕರ ನಡೆಗೆ ಆಕ್ಷೇಪಿಸಿದ್ದಾರೆ.
ಪಾಟ್ನಾದಲ್ಲಿ ಮಾತನಾಡಿದ ಅವರು, ಜಯ್ ಶಾ ವಿರುದ್ಧ ಲೇಖನ ಪ್ರಕಟಿ ಸಿದ ವೆಬ್‌ಸೈಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ ಮಾಧ್ಯಮ ಸ್ವಾತಂತ್ರ್ಯ ಕಾಪಿಡುವ ಪ್ರಯತ್ನ ಮಾಡಬಹುದಾಗಿತ್ತು ಎಂದಿದ್ದಾರೆ.
ಈ ಮೂಲಕ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯ ಲ್‌ರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಸಿನ್ಹಾ. ಅಹಮದಾಬಾದ್ ಕೋರ್ಟ್‌ಗೆ ಜಯ್ ಶಾ ಪರವಾಗಿ ಅರ್ಜಿ ಸಲ್ಲಿಸಲು ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರನ್ನು ಕರೆಯಿಸಿ ಕೊಂಡಿದ್ದು ಸರಿಯಲ್ಲ. ಇದು ತಪ್ಪು ಸಂದೇಶ ನೀಡುತ್ತದೆ ಎಂದಿದ್ದಾರೆ ಸಿನ್ಹಾ.
ವಿಚಾರಣೆ ಮುಂದಕ್ಕೆ: ಈ ನಡುವೆ ಅಹ್ಮದಾಬಾದ್‌ನ ಮೆಟ್ರೋಪಾಲಿಟನ್ ಕೋರ್ಟ್‌ನಲ್ಲಿ ಅಮಿತ್ ಶಾ “ದ ವೈರ್’ ವಿರುದ್ಧ ಸಲ್ಲಿಸಿದ್ದ 100 ಕೋಟಿ ರೂ. ಮೊತ್ತದ ಮಾನನಷ್ಟ ಮೊಕದ್ದಮೆ ವಿಚಾರಣೆ ಮುಂದೂಡಲಾಗಿದೆ. ಜಯ್ ಶಾ ಪರ ವಕೀಲರು ಹಾಜರಾತಿಗೆ ಹೆಚ್ಚಿನ ಸಮಯ ಕೋರಿದ್ದನ್ನು ಕೋರ್ಟ್ ಸಮ್ಮತಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.