ಮುಸ್ಲಿಂ,ದಲಿತರನ್ನು ಮನುಷ್ಯರೆಂದು ಪರಿಗಣಿಸುತ್ತಿಲ್ಲ: ಯೋಗಿ ಸರ್ಕಾರದ ವಿರುದ್ಧ ರಾಹುಲ್ ಕಿಡಿ
Team Udayavani, Oct 11, 2020, 1:07 PM IST
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ನಾಚಿಕೆಗೇಡಿನ ಸತ್ಯವೆಂದರೆ ಅನೇಕ ಭಾರತೀಯರು ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರು ಎಂದು ಪರಿಗಣಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ರಾಸ್ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತು ಉತ್ತರಪ್ರದೇಶ ಪೊಲೀಸರು ನೀಡುತ್ತಿರುವ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಯೋಗಿ ಸರ್ಕಾರ ಮತ್ತು ಅವರ ಪೊಲೀಸರು ಯಾರೂ ಕೂಡ ಅತ್ಯಾಚಾರವಾಗಲಿಲ್ಲ ಎಂದು ಹೇಳುತ್ತಿದ್ದಾರೆ. ಏಕೆಂದರೇ ಅತ್ಯಾಚಾರ ಸಂತ್ರಸ್ಥೆಯನ್ನು ಅವರು ಭಾರತೀಯಳೆಂದು ಪರಿಗಣಿಸಲಿಲ್ಲ. ಮಾತ್ರವಲ್ಲದೆ ಮಾಧ್ಯಮದ ವರದಿಯನ್ನು ಉಲ್ಲೇಖಿಸಿ ಪೊಲೀಸರು ಕೂಡ ಅತ್ಯಾಚಾರ ಆರೋಪವನ್ನು ನಿರಾಕರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸೆಪ್ಟೆಂಬರ್ 14 ರಂದು ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯ ದಲಿತ ಯುವತಿಯೊಬ್ಬಳು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ, ದೆಹಲಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಈ ಘಟನೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಉತ್ತರ ಪ್ರದೇಶ ಪೊಲೀಸರು ಕೂಡ ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂಬ ಅಭಿಪ್ರಾಯಗಳು ಕೂಡ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೆ ನಾಲ್ವರನ್ನು ಬಂಧಿಸಲಾಗಿತ್ತು.
ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಸಂತ್ರಸ್ಥೆಯ ಮನೆಗೆ ಭೇಟಿ ಕೊಟ್ಟು, ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರು ತನಿಖೆಯಲ್ಲಿ ಅನುಸರಿಸುತ್ತಿರುವ ವಿಳಂಬ ನೀತಿಯ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು.
The shameful truth is many Indians don’t consider Dalits, Muslims and Tribals to be human.
The CM & his police say no one was raped because for them, and many other Indians, she was NO ONE.https://t.co/mrDkodbwNC
— Rahul Gandhi (@RahulGandhi) October 11, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.