ಶಶಿಕಲಾಗೆ ನಕಲಿ ಕಂಪೆನಿಗಳ ನಂಟು

Team Udayavani, Nov 13, 2017, 6:15 AM IST

shashikala.jpg

ಚೆನ್ನೈ: ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾಗೆ ಶೆಲ್‌ ಕಂಪೆನಿಗಳ ನಂಟು ಇತ್ತೇ ಎಂಬ ಶಂಕೆ ವ್ಯಕ್ತವಾಗಿದೆ. ಐಟಿ ದಾಳಿ ನಡೆದ ಸಂದರ್ಭ ಜಯಾ ಟಿವಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ವಿವೇಕ್‌ ಜಯರಾಮನ್‌ಗೆ ಸೇರಿದ 100 ಬ್ಯಾಂಕ್‌ ಖಾತೆಗಳನ್ನು ಗುರುತಿಸ ಲಾಗಿದೆ. ಮಾತ್ರವಲ್ಲ ನೋಟು ಅಪಮೌಲ್ಯದ ಬಳಿಕ ಬಹುಕೋಟಿ ರೂ. ಮೊತ್ತವನ್ನು ಅವುಗಳಲ್ಲಿ ಠೇವಣಿಯಾಗಿ ಇರಿಸಿದ್ದರ ಬಗ್ಗೆ ಅನುಮಾನ ಗಳೂ ವ್ಯಕ್ತವಾಗಿವೆ.

ವಿವೇಕ್‌ ಸದ್ಯ ಬೆಂಗಳೂರಿನ ಪರ ಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿ ಸುತ್ತಿರುವ ವಿ.ಕೆ. ಶಶಿಕಲಾರ ಸೋದರ ಸಂಬಂಧಿ. ಆದಾಯ ತೆರಿಗೆ ಅಧಿಕಾರಿಗಳು ಈ ಬ್ಯಾಂಕ್‌ ಖಾತೆ ಗಳನ್ನು ಜಪ್ತಿ ಮಾಡಿಕೊಂಡಿದ್ದು, ಶುಕ್ರವಾರ ನಡೆದಿದ್ದ ದಾಳಿಯಲ್ಲಿ 6 ಕೋಟಿ ರೂ. ನಗದು, 8.5 ಕೆಜಿ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಜತೆಗೆ ಕಾಲೇಜೊಂದರ ಹಾಸ್ಟೆಲ್‌ ಕಪಾಟಿನಿಂದ ಬಹುಕೋಟಿ ರೂ. ಮೌಲ್ಯದ ವಜ್ರಗಳನ್ನೂ ವಶಪಡಿಸಿಕೊಳ್ಳಲಾಗಿತ್ತು.

ಜಯಾ ಟಿವಿ ಎಂ.ಡಿ. ವಿವೇಕ್‌ ಜಯರಾಮನ್‌ 20ಕ್ಕೂ ಅಧಿಕ ಕಂಪೆನಿಗಳ ಹೆಸರಲ್ಲಿ ಬ್ಯಾಂಕ್‌ ಖಾತೆ ಹೊಂದಿರುವುದು ದಾಖಲೆಗಳ ಪರಿಶೀಲನೆ ವೇಳೆ ಗೊತ್ತಾಗಿದೆ. ನೋಟು ಅಪಮೌಲ್ಯದ ಬಳಿಕ ಕೋಟಿಗಟ್ಟಲೆ ರೂ. ಮೊತ್ತವನ್ನು ಅವುಗಳಲ್ಲಿ ತೊಡಗಿಸಲಾಗಿತ್ತು. ದಾಳಿ ಸಂದರ್ಭ ಖಾತೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅವರ ಸಹೋದರಿ ಕೃಷ್ಣ ಪ್ರಿಯಾ ಮತ್ತು ಆಡಿಟರ್‌ ನಿವಾಸಕ್ಕೆ ದಾಳಿ ನಡೆಸಿದ ವೇಳೆ ಇನ್ನೂ ಹಲವು ಕಾಗದ ಪತ್ರ ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ ಆದಾಯ ತೆರಿಗೆ ಇಲಾಖೆ ಹಿರಿಯ ಅಧಿಕಾರಿಗಳು. ಈ ಖಾತೆಯಲ್ಲಿ ತೊಡಗಿಸಲಾಗಿರುವ ಮೊತ್ತದಿಂದ ಕೋಟಿಗಟ್ಟಲೆ ರೂ. ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ ಖರೀದಿಗೆ ವಿನಿಯೋಗಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ದಾಳಿ ಮುಕ್ತಾಯ: ಕೊಡನಾಡ್‌ ಎಸ್ಟೇಟ್‌, ಇತರ ಸ್ಥಳಗಳಲ್ಲಿ ರವಿ ವಾರವೂ ಶೋಧಕಾರ್ಯ ಮುಂದು ವರಿದಿತ್ತು. ಒಟ್ಟಾರೆ ಬೆಳವಣಿಗೆ ಬಗ್ಗೆ ಚೆನ್ನೈಯಲ್ಲಿ ಪ್ರತಿಕ್ರಿಯೆ ನೀಡಿದ ಆದಾಯ ತೆರಿಗೆ ಅಧಿಕಾರಿಗಳು, ಇಲಾಖೆ ದಾಳಿ ಬಹುತೇಕ ಪೂರ್ಣ ಗೊಂಡಿದೆ ಎಂದು ತಿಳಿಸಿದೆ. ಇನ್ನೇನಿದ್ದರೂ ಹೇಳಿಕೆ ದಾಖಲಿಸುವುದು, ಅದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಪ್ರಕ್ರಿಯೆ ಮಾತ್ರ ಉಳಿದಿದೆ ಎಂದಿದ್ದಾರೆ.

ವಿ.ಕೆ. ಶಶಿಕಲಾ ಮತ್ತು ಇತರರ 
ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದರಲ್ಲಿ ಯಾವ ಸಂಚೂ ಇಲ್ಲ. ಸೂಕ್ತ ಮಾಹಿತಿ ಮತ್ತು ದಾಖಲೆಗಳ ಆಧಾರದಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ.

-ಪೊನ್‌ ರಾಧಾಕೃಷ್ಣನ್‌, ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ

ಟಾಪ್ ನ್ಯೂಸ್

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.